ಸೆ 9 : ಉಡುಪಿ ಜಿಲ್ಲೆಯಲ್ಲಿ 258 ಮಂದಿಗೆ ಕೊರೋನಾ ಪಾಸಿಟಿವ್ ದೃಢ, 1 ಸಾವು

Spread the love

ಸೆ 9 : ಉಡುಪಿ ಜಿಲ್ಲೆಯಲ್ಲಿ 258 ಮಂದಿಗೆ ಕೊರೋನಾ ಪಾಸಿಟಿವ್ ದೃಢ, 1 ಸಾವು

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಬುಧವಾರ ಒಟ್ಟು 258 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 13345 ಕ್ಕೆ ಏರಿಕೆಯಾಗಿದೆ.

ಸೋಂಕಿತರಲ್ಲಿ ಉಡುಪಿಯ 162, ಕುಂದಾಪುರದ 39, ಕಾರ್ಕಳದ 41 ಹಾಗೂ ಇತರೆ ಜಿಲ್ಲೆಗಳ 16 ರೋಗಿಗಳು ಇದ್ದಾರೆ. 144 ಸೋಂಕಿತರಿಗೆ ರೋಗದ ಗುಣಲಕ್ಷಣಗಳು ಕಂಡುಬಂದರೆ 114 ಮಂದಿಗೆ ಲಕ್ಷಣಗಳು ಇಲ್ಲ.

ಪ್ರಾಥಮಿಕ ಸಂಪರ್ಕದ171, ಐಎಲ್ಐ ಲಕ್ಷಣಗಳಿರುವ 49, ‘ಸಾರಿ’ ಲಕ್ಷಣಗಳಿರುವ 7 ಹಾಗೂ ಹೊರ ಜಿಲ್ಲೆ, ಹೊರದೇಶಗಳ ಪ್ರಯಾಣ ಹಿನ್ನೆಲೆ ಹೊಂದಿರುವ 0 ಮಂದಿಗೆ ಸೋಂಕು ತಗುಲಿದ್ದು, 31 ಜನರ ಸೋಂಕಿನ ಮೂಲವನ್ನು ಪತ್ತೆ ಹಚ್ಚಲಾಗುತ್ತಿದೆ.

ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ, ಶೀತಜ್ವರ, ಉಸಿರಾಟದ ಸಮಸ್ಯೆ ಇರುವ 1315 ಜನರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಬುಧವಾರ 1000 ವರದಿಗಳು ನೆಗೆಟಿವ್ ಬಂದಿದ್ದು, 258 ಪಾಸಿಟಿವ್ ಬಂದಿವೆ. 368 ವರದಿಗಳು ಬರುವುದು ಬಾಕಿ ಇದೆ.

ಜಿಲ್ಲೆಯಲ್ಲಿ ಬುಧವಾರ 218 ಮಂದಿ ಗುಣಮುಖರಾಗಿದ್ದು ಇದುವರೆಗೂ 11342 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 1884 ಸಕ್ರಿಯ ಪ್ರಕರಣಗಳು ಬಾಕಿ ಇವೆ. ಜಿಲ್ಲೆಯಲ್ಲಿ ಬುಧವಾರ 1 ಮಂದಿ ಕೊರೊನಾದಿಂದ ಸಾವನಪ್ಪಿದ್ದು, ಇದುವರೆಗೆ ಕೊರೋನಾದಿಂದ ಒಟ್ಟು 122 ಮಂದಿ ಸಾವನಪ್ಪಿದ್ದಾರೆ.


Spread the love