ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ‘ಪ್ರತೀಕಾರ’ ಪೋಸ್ಟ್‌ಗಳ ಅಬ್ಬರ

Spread the love

ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ‘ಪ್ರತೀಕಾರ’ ಪೋಸ್ಟ್‌ಗಳ ಅಬ್ಬರ

ಮಂಗಳೂರು: ಪೊಲೀಸರ ಕಟ್ಟುನಿಟ್ಟಿನ ಕ್ರಮದ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಗಲಭೆ, ಹಿಂಸೆಗೆ ದುಪ್ರೇರಣೆ ನೀಡುವ ಪೋಸ್ಟ್‌ಗಳು ಕಡಿಮೆಯಾಗಿದ್ದವು. ಇದೀಗ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಇಂತಹಾ ಪೋಸ್ಟ್‌ಗಳು ಕಾಣಿಸಿದ್ದು ಆತಂಕಕ್ಕೆ ಕಾರಣವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಬಗ್ಗೆ ಸಂದೇಶಗಳು ಓಡಾಡುತ್ತಿದ್ದು, Target 900, Team Target Boys, Immu Bai ಇನ್ನಾ ಗ್ರಾಮ್ ಪೇಜ್‌ಗಳಲ್ಲಿ ಭಯ ಹುಟ್ಟಿಸುತ್ತಿರುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. 2017ರಲ್ಲಿ ನಡೆದ ಎಸ್‌ಡಿಪಿಐ ಮುಖಂಡ ಕಲಾಯಿ ಅಶ್ರಫ್ ಹತ್ಯೆ ಪ್ರಮುಖ ಆರೋಪಿ, ಹಿಂದೂ ಸಂಘಟನೆಯ ಮುಖಂಡ ಭರತ್ ಕುಮೇಲ್‌ಗೆ ಈ ಮೂಲಕ ಎಚ್ಚರಿಕೆ ನೀಡಲಾಗಿದೆ.

Revange Is Loading, Target Set One By One ಎಂಬ ಸಂದೇಶ ಇರುವ ಪೋಸ್ಟ್ ಮಾಡಲಾಗಿದ್ದು, ಕೈಯಲ್ಲಿ ತಲವಾರು ಮತ್ತು ಪಿಸ್ತೂಲ್ ಹಿಡಿದು ಮುಖ ಮರೆಮಾಚಿ ಮಾಡಿರುವ ರೀಲ್ಸ್ ಕೂಡ ಪೋಸ್ಟ್ ಮಾಡಲಾಗಿದೆ. ಇತ್ತೀಚೆಗೆ ಕೇರಳದಲ್ಲಿ ಹತ್ಯೆಯಾದ ರೌಡಿಶೀಟರ್ ನೌಥಾಲ್ ಸಾವಿಗೂ ಪ್ರತೀಕಾರದ ಎಚ್ಚರಿಕೆ ನೀಡಲಾಗಿದೆ. ಭರತ್ ಕುಮ್ಮೇಲ್ ಸದ್ಯ ಮಂಗಳೂರು ಜೈಲಿನಲ್ಲಿದ್ದು, ಪ್ರಚೋದನಾಕಾರಿ ಇನ್ನಾ ಗ್ರಾಮ್ ಪೋಸ್ಟ್‌ಗಳ ಮೇಲೆ ಮಂಗಳೂರು ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಈ ಬಗ್ಗೆ ಸುಮೋಟೊ ಕೇಸ್ ದಾಖಲಿಸಿರುವ ಖಾಕಿ, 16 ಇನ್ನಾ ಗ್ರಾಮ್ ಖಾತೆಗಳ ವಿರುದ್ಧ ಎಫ್‌ಐಆರ್ ಮಾಡಿದೆ. ಜೊತೆಗೆ ಅಯಕಟ್ಟಿನ ಜಾಗಗಳ ಮೇಲೆ ಹದ್ದಿನ ಕಣ್ಣಿಡಲಾಗಿದ್ದು, ನಟೋರಿಯಸ್ ಗ್ಯಾಂಗ್‌ಗಳ ಚಲನವಲನಗಳನ್ನೂ ಗಮನಿಸಲಾಗುತ್ತಿದೆ.

ಈ ಹಿಂದೆಯೂ ಭರತ್ ಕುಮೇಲ್‌ಗೆ ಸಾಮಾಜಿಕ ತಾಣಗಳ ಮೂಲಕ ಕೊಲೆ ಬೆದರಿಕೆ ಹಾಕಲಾಗಿತ್ತು. BEARY_ROYAL_NAWAB, ಬ್ಯಾರಿ ಟ್ರೋಲರ್, ಮಂಗಳೂರು ಕಿಂಗ್ ಎಂಬ ಹೆಸರಿನ ಪೇಜ್‌ಗಳ ಮುಖಾಂತರ ಎಚ್ಚರಿಕೆಯ ಸಂದೇಶ ಬಂದಿತ್ತು. ಭರತ್ ಕುಮೇಲ್ ರಕ್ತ ಈ ಭೂಮಿಗೆ ಹರಿಸದೆ ನಮಗೆ ಸಮಾಧಾನವಿಲ್ಲ. ನಮ್ಮ ಸಹೋದರ ಶಾಹಿದ್ ಅಶ್ರಫ್ ಕಲಾಯಿಯನ್ನು ಮರೆತಿಲ್ಲ, ಪ್ರತಿರೋಧ ಅಪರಾಧವಲ್ಲ ಎಂದು ಪೋಸ್ಟ್ ಮಾಡಲಾಗಿತ್ತು.


Spread the love
Subscribe
Notify of

0 Comments
Inline Feedbacks
View all comments