ಸೌತಡ್ಕ : ಕಾಡಾನೆ ದಾಳಿ : ಬಾಲಕೃಷ್ಣ ಶೆಟ್ಟಿ ಸ್ಥಳದಲ್ಲೇ ಸಾವು
ಕೊಕ್ಕಡ: ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಅದನ್ನು ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಓರ್ವ ವ್ಯಕ್ತಿಗೆ ಸೋಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿ ಆತ ಮೃತಪಟ್ಟ ಘಟನೆ ಜು. 17 ರಂದು ನಡೆದಿದೆ.
ಮೃತ ವ್ಯಕ್ತಿ ಸೌತಡ್ಕದ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂದು ತಿಳಿದುಬಂದಿದೆ.
ಬೆಳ್ಳಂಬೆಳ್ಳಗೆ ಎರಡು ಆನೆಗಳು ಗೇರು ಪ್ಲಾಂಟೇಶನ್ ನಲ್ಲಿ ತಿರುಗಾಡುತ್ತಿದ್ದು ಕಂಡು ಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಬಂದಿದ್ದರು. ಆನೆ ಓಡಿಸುವ ಸಂದರ್ಭದಲ್ಲಿ ಆನೆಯು ತಿರುಗಿ ಬಂದು ನಡೆದುಕೊಂಡು ಹೋಗುತ್ತಿದ್ದ ಬಾಲಕೃಷ್ಣ ಶೆಟ್ಟಿ ಎಂಬವರಿಗೆ ಸೊಂಡಿಲಿನಿಂದ ತಿವಿದು, ಗಂಭೀರ ಗಾಯಗೊಳಿಸಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.