ಸ್ಪೀಕರ್ ಖಾದರ್ ಕುರಿತು ಅದಮಾರು ಹಿರಿಯ ಶ್ರೀಗಳಿಂದ ಏಕವಚನದಲ್ಲಿ ನಿಂದನೆ – ವ್ಯಾಪಕ ಖಂಡನೆ

Spread the love

ಸ್ಪೀಕರ್ ಖಾದರ್ ಕುರಿತು ಅದಮಾರು ಹಿರಿಯ ಶ್ರೀಗಳಿಂದ ಏಕವಚನದಲ್ಲಿ ನಿಂದನೆ – ವ್ಯಾಪಕ ಖಂಡನೆ

ಉಡುಪಿ: ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಅವರ ಕನ್ನಡದ ಕುರಿತು ಮಾತನಾಡುವಾಗ ಏಕವಚನದಲ್ಲಿ ಸಂಬೋಧಿಸಿ ನಿಂದಿಸಿರುವ ಉಡುಪಿ ಅದಮಾರು ಮಠದ ಹಿರಿಯ ಸ್ವಾಮೀಜಿ ವಿಶ್ವಪ್ರೀಯ ತೀರ್ಥರ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

YouTube player

Watch Video 

ಮುಂಡ್ಕೂರು ಕಜೆ ಶ್ರೀ ಮಹಾಮ್ಮಾಯಿ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಾಶಾಭೀಷೇಕದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಅದಮಾರು ಮಠದ ಹಿರಿಯ ಸ್ವಾಮೀಜಿಗಳು ಮಾತನಾಡಿ “ಕನ್ನಡ ಹೋರಾಟಗಾರರು ಕನ್ನಡ ಕನ್ನಡ ಎಂದು ಹೊರಳಾಡಿಕೊಳ್ತಾರೆ. ಅವರ ಮಕ್ಕಳು ಆಂಗ್ಲ ಶಾಲೆಯಲ್ಲಿ ಓದುತ್ತಿದ್ದಾರೆ ಇವರು ಹಿಂದಿ ಬೋರ್ಡ್ ಬಗ್ಗೆ ಗಲಾಟೆ ಮಾಡ್ತಾರೆ ಅಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಸಭೆ ನಡೆಯುವಾಗ ಒಬ್ಬ ಅಧ್ಯಕ್ಷ ಮೇಲ್ಗಡೆ ಕೂತಿರ್ತಾನೆ ಅವನ ಕನ್ನಡ ಕೇಳಿದ್ದೀರಾ? ಕೇಳಿಲ್ಲಾ ಅಂದ್ರೆ ಸರಿಯಾಗಿ ಕೇಳಿಸಿಕೊಳ್ಳಿ ಲ ಕಾರ ಳ ಕಾರಾಗಳ ವ್ಯತ್ಯಾಸ ಇಲ್ಲದ ರೀತಿ ಕನ್ನಡ ಭಾಷೆ ಬರ್ತಾ ಉಂಟು. ಆದರೆ ಕೆಲವರು ಸುಮ್ಮನೆ ಕನ್ನಡ ಕನ್ನಡ ಅಂತ ಗಲಾಟೆ ಮಾಡ್ತಾರೆ” ಎಂದು ಸ್ವಾಮೀಜಿ ಹೇಳಿರುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸ್ವಾಮೀಜಿಯವರ ಈ ನಡೆಗೆ ವ್ಯಾಪಕ ಅಸಮಾಧಾನ ವ್ಯಕ್ತವಾಗಿದ್ದು ವಿಧಾನಸಭಾಧ್ಯಕ್ಷರನ್ನು ಏಕವಚನದಲ್ಲಿ ಸಂಭೋಧಿಸಿ ಹಿರಿಯ ಸ್ವಾಮೀಜಿಗಳು ಈ ರೀತಿ ಮಾತನಾಡಿದ್ದು ಖಂಡನಾರ್ಹ ಎಂದು ಜನರಿಂದ ಅಭಿಪ್ರಾಯ ವ್ಯಕ್ತವಾಗಿದೆ.


Spread the love