ಹತ್ತು ದಿನಗಳಲ್ಲಿ ಮೂರನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆ

Spread the love

ಹತ್ತು ದಿನಗಳಲ್ಲಿ ಮೂರನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆ

ನವದೆಹಲಿ: ದೇಶದಲ್ಲಿ ದೀರ್ಘಕಾಲದವರೆಗೆ ಸ್ಥಿರವಾಗಿದ್ದ ಇಂಧನ ದರಗಳಿಗೆ ಈಗ ಜಾಗತಿಕ ಮಾರುಕಟ್ಟೆಯ ಬಿಸಿ ತಟ್ಟಿದೆ. ಶನಿವಾರದ ತೈಲ ಕಂಪನಿಗಳ ನಿರ್ಧಾರದಂತೆ ಪೆಟ್ರೋಲ್ ಬೆಲೆ ಲೀಟರ್ಗೆ 87 ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್ಗೆ 91 ಪೈಸೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 107.14 ರೂ. ಆಗಿದ್ದು ಡೀಸೆಲ್ ಬೆಲೆ 95.04 ರೂ. ಆಗಿದೆ.

ಮೇ ತಿಂಗಳಲ್ಲಿ ಮೂರನೇ ಬಾರಿ ಏರಿಕೆ ಇತ್ತೀಚಿನ ದಿನಗಳಲ್ಲಿ ತೈಲ ಕಂಪನಿಗಳು ಗ್ರಾಹಕರ ಮೇಲೆ ಸತತವಾಗಿ ಇಂಧನ ಹೊರೆಯನ್ನು ಹಾಕುತ್ತಿವೆ. ಈ ವಾರದ ಆರಂಭದಲ್ಲಷ್ಟೇ ಲೀಟರ್ ಇಂಧನಕ್ಕೆ 90 ಪೈಸೆ ಹೆಚ್ಚಿಸಲಾಗಿತ್ತು. ಅದಕ್ಕೂ ಮೊದಲು ತೈಲ ಮಾರುಕಟ್ಟೆ ಕಂಪನಿಗಳು (OMCs) ಪ್ರತಿ ಲೀಟರ್ಗೆ ಒಮ್ಮೆಗೆ ಸುಮಾರು 3 ರೂ.ಗಳಷ್ಟು ದರಗಳನ್ನು ಹೆಚ್ಚಿಸುವ ಮೂಲಕ ದೀರ್ಘಾವಧಿಯ ಬೆಲೆ ಸ್ಥಿರತೆಗೆ ಬ್ರೇಕ್ ಹಾಕಿದ್ದವು. ಇತ್ತೀಚಿನ ಈ ಪರಿಷ್ಕರಣೆಯಿಂದಾಗಿ ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 97.77 ರೂ.ಗಳಿಂದ 98.64 ರೂ.ಗಳಿಗೆ ತಲುಪಿದೆ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 87 ಪೈಸೆ ಏರಿಕೆಯಾಗಿ, 98.64 ರೂ.ಗಳಿಂದ 99.51 ರೂ.ಗಳಿಗೆ ತಲುಪಿದೆ. ಡೀಸೆಲ್ ಬೆಲೆ ಲೀಟರ್ಗೆ 91 ಪೈಸೆ ಏರಿಕೆಯಾಗಿ 91.58 ರೂ.ಗಳಿಂದ 92.49 ರೂ.ಗಳಿಗೆ ತಲುಪಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ 110.57 ರೂ. ಡೀಸೆಲ್ 96.04 ರೂ. ಆಗಿದೆ. ಮುಂಬೈನಲ್ಲಿ ಪೆಟ್ರೋಲ್ 107.56 ರೂ. ಡೀಸೆಲ್, 94.05 ರೂ.ಚೆನ್ನೈನಲ್ಲಿ ಪೆಟ್ರೋಲ್ 104.54 ರೂ. ಡೀಸೆಲ್ 96.16 ರೂ. ಆಗಿದೆ.


Spread the love
Subscribe
Notify of

0 Comments
Inline Feedbacks
View all comments