ಹದಗೆಟ್ಟ ರಸ್ತೆಗಳ ದುರಸ್ತಿಗೆ ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ

Spread the love

ಹದಗೆಟ್ಟ ರಸ್ತೆಗಳ ದುರಸ್ತಿಗೆ ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ

ಉಡುಪಿ: ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಸಂಚಾರಕ್ಕೆ ಯೋಗ್ಯವಲ್ಲದ ಸ್ಥಿತಿಯಲ್ಲಿರುವ ಉಡುಪಿ ಕರಾವಳಿ ಜಂಕ್ಷನ್ ನಿಂದ ಮಲ್ಪೆ ತನಕದ ರಾಷ್ಟ್ರೀಯ ಹೆದ್ದಾರಿ ಹಾಗೂ ಉಡುಪಿ ನಗರ ಭಾಗದ ರಸ್ತೆಗಳನ್ನು ಕೂಡಲೇ ದುರಸ್ತಿಗೊಳಿಸಿ ವಾಹನ ಸಂಚಾರ ಸುಗಮಗೊಳಿಸುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಯಿತು.

ಹಾಗೆಯೇ ಉಡುಪಿಯ ಹಲವಾರು ಪ್ರಮುಖ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿ ಆ ಸಮಸ್ಯೆಗಳನ್ನು ಬಗೆಹರಿಸಲು ಕ್ರಮಕೈಗೊಳ್ಳುವಂತೆ ಕೂಡ ವಿನಂತಿಸಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಗಣೇಶ್ ನೆರ್ಗಿ, ಚಂದ್ರಮೋಹನ್, ಸತೀಶ್ ಕೊಡವೂರು, ಸತೀಶ್ ಕುಮಾರ್ ಮಂಚಿ, ಕೃಷ್ಣ ಹೆಬ್ಬಾರ್,ನಂದ ಕಿಶೋರ್,ಭರತ್ ಕುಮಾರ್, ಗಿರೀಶ್ ಪೂಜಾರಿ, ಚಿತ್ತರಂಜನ್ ಹೆರ್ಗ,ಜೊಸ್ಸಿ ಪಿಂಟೊ, ಮಮತಾ ಶೆಟ್ಟಿ, ಚಂದ್ರಿಕಾ ಶೆಟ್ಟಿ, ಸಂಧ್ಯಾ ತಿಲಕ್ ರಾಜ್, ಪ್ರಮೀಳಾ ಸುವರ್ಣ, ಸುಂದರಿ ಪುತ್ತೂರು, ಅರ್ಚನಾ ದೇವಾಡಿಗ, ಸುಪ್ರೀತಾ ಉಪಸ್ಥಿತರಿದ್ದರು.

ಅಂಬಲಪಾಡಿ ಕಾರ್ತಿಕ್ ಹೋಟೇಲ್ ಎದುರು ಮರಣಗುಂಡಿ
ಅಂಬಲಪಾಡಿ ಬಳಿ ಸಾಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದು ವಾಹನ ಸಂಚಾರವೇ ಕಷ್ಟಕರವಾಗಿದೆ. ಅಂಬಲಪಾಡಿ ಕಾರ್ತಿಕ್ ಹೋಟೆಲ್ ಬಳಿ ದೊಡ್ಡ ಪ್ರಮಾಣದಲ್ಲಿ ಗುಂಡಿ ನಿರ್ಮಾಣವಾಗಿದ್ದು ದ್ವಿಚಕ್ರ ವಾಹನ ಸವಾರರು ಸ್ವಲ್ಪ ಸ್ಪೀಡ್ ಇದ್ದರೆ ಇಲ್ಲಿ ಬಿದ್ದು ಗಾಯ ಮಾಡಿಕೊಂಡರೆ ನಾಲ್ಕು ಚಕ್ರದ ವಾಹನಗಳು ಹೊಂಡದಲ್ಲಿ ಸಿಕ್ಕಿಬಿದ್ದು ಗಂಟೆಗಟ್ಟಲೇ ಟ್ರಾಫಿಕ್ ಜಾಮ್ ಪರಿಸ್ಥಿತಿ ನಿರ್ಮಾಣವಾಗಿದೆ.

ಮಳೆ ಸಂದರ್ಭ ರಸ್ತೆಯಲ್ಲಿ ನೀರು ನಿಲ್ಲುವುದರಿಂದ ಗುಂಡಿಗಳ ಬಗ್ಗೆ ಗೊತ್ತಿಲ್ಲದೆ ದ್ವಿಚಕ್ರ ವಾಹನ ಸವಾರರು ಗುಂಡಿಗೆ ಬಿದ್ದು ಗಾಯ ಮಾಡಿಕೊಳ್ಳುವುದು ಸಾಮಾನ್ಯವಾಗಿದೆ. ವಾಹನಸವಾರರ ಸಮಸ್ಯೆಗಳ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬಗ್ಗೆ ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿದೆ. ಸಾರ್ವಜನಿಕರ ಹಾಗೂ ವಾಹನ ಸವಾರರ ಅವಸ್ಥೆಗೆ ಮರುಗಿದ ಟ್ರಾಫಿಕ್ ಪೊಲೀಸರು ಮಣ್ಣು ಹಾಕಿ ಮುಚ್ಚುವ ಕೆಲಸ ಮಾಡಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments