ಹಲ್ಲೆ, ಜೀವ ಬೆದರಿಕೆ ಪ್ರಕರಣದಲ್ಲಿ ಆರೋಪಿಯಾಗಿ, ನ್ಯಾಯಾಲಯಕ್ಕೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾತನ ಬಂಧನ
ಬಂಟ್ವಾಳ: ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಬಂಟ್ವಾಳ ತಾಲೂಕಿನ ಕನ್ಯಾನ ನಿವಾಸಿ ಆನಂದ (39) ಅವರ ಮೇಲೆ 16-09-2020 ರಂದು ಅಜೀಝ್, ತೋಯಿಬ್, ಆಶೀಪ್, ಕಲೀಲ್, ಅಜೀಝ್ ಸೇರಿದಂತೆ ಹಲವರು ಸೇರಿಕೊಂಡು ಅವ್ಯಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದ ಘಟನೆ ನಡೆದಿದೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 135/2020, ಕಲಂ 143, 147, 148, 341, 323, 324, 504, 506 ಹಾಗೂ 149 ರಂತೆ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದ ಆರೋಪಿಗಳ ಪೈಕಿ ಕನ್ಯಾನ ನಿವಾಸಿ ಮೊಯಿದ್ದೀನ ಶಾಕೀರ್ @ ಮೊಯಿದ ಶಾಕೀರ (27) ಮಾನ್ಯ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡು ವಿದೇಶಕ್ಕೆ ತೆರಳಿದ್ದಾನೆ. ಇದರಿಂದಾಗಿ ಅವನ ವಿರುದ್ಧ ಮಾನ್ಯ ನ್ಯಾಯಾಲಯವು ದಸ್ತಗಿರಿ ವಾರೆಂಟ್ ಜಾರಿಗೊಳಿಸಿತ್ತು.
ಈ ಹಿನ್ನೆಲೆಯಲ್ಲಿ, 13-11-2025 ರಂದು ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿಯನ್ನು ದಸ್ತಗಿರಿ ಮಾಡಲಾಗಿದ್ದು, ನಂತರ 14-11-2025 ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯನ್ನು ಸೂಕ್ತ ಜಾಮೀನಿನೊಂದಿಗೆ ಬಿಡುಗಡೆ ಮಾಡಿದೆ.













