ಹಾಲು ಸಾಗಾಟ ವಾಹನದಲ್ಲಿ ಗೋ ಮಾಂಸ ಸಾಗಾಟ ಪತ್ತೆ ಹಚ್ಚಿದ ಹಿಂದೂ ಸಂಘಟನೆ ಕಾರ್ಯಕರ್ತರು 

Spread the love

ಹಾಲು ಸಾಗಾಟ ವಾಹನದಲ್ಲಿ ಗೋ ಮಾಂಸ ಸಾಗಾಟ ಪತ್ತೆ ಹಚ್ಚಿದ ಹಿಂದೂ ಸಂಘಟನೆ ಕಾರ್ಯಕರ್ತರು 

ಮಂಗಳೂರು: ಹಾಲನ್ನು ಸಾಗಿಸುವ ವ್ಯಾನ್ ಒಂದರಲ್ಲಿ ಗೋ ಮಾಂಸ ಸಾಗಾಟ ಮಾಡುತ್ತಿರುವುದನ್ನು ಹಿಂದೂ ಸಂಘಟನೆ ಕಾರ್ಯಕರ್ತರು ಮಂಗಳೂರಿನ ಪಂಪ್ ವೆಲ್ ಬಳಿ ಪತ್ತೆ ಹಚ್ಚಿದ್ದಾರೆ.

ಮಂಗಳವಾರ ಮುಂಜಾನೆ ಪಂಪ್ ವೆಲ್ ಕಡೆಯಿಂದ ಬರುತ್ತಿದ್ದ ಟೆಂಪೊವೊಂದನ್ನು ತಡೆದು ನಿಲ್ಲಿಸಲು ಹಿಂದೂ ಸಂಘಟನೆಯ ಕಾರ್ಯಕರ್ತರು ಪ್ರಯತ್ನಿಸಿದ್ದು ಅದು ನಿಲ್ಲಿಸದೆ ಹೋಗಿದೆ. ಆ ವೇಳೆ ಹಿಂದೂ ಸಂಘಟನೆಯ ಕಾರ್ಯಕರ್ತರು ವ್ಯಾನ್ ಹಿಂಬಾಲಿಸಿಕೊಂಡು ಹೋಗಿ ವೆನ್ಲಾಕ್ ಆಸ್ಪತ್ರೆಯ ಬಳಿ ತಡದಿದ್ದು, ಒರ್ವನನ್ನು ವಶಕ್ಕೆ ಪಡೆದಿದ್ದು ಇನ್ನಿಬ್ಬರು ತಪ್ಪಿಸಿಕೊಂಡಿದ್ದಾರೆ.

ಹಾಲನ್ನು ಸಾಗಿಸುವ ವಾಹನದಲ್ಲಿ ಟ್ರೇಗಳ ಎಡೆಯಲ್ಲಿ ಗೋಮಾಂಸವನ್ನು ತುಂಬಿಸಿಕೊಂಡು ಬರಲಾಗುತ್ತಿತ್ತು ಎಂದು ಹಿಂದೂ ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದು, ವ್ಯಾನ್ ಸಹಿತ ಆರೋಪಿಯನ್ನು ಬಂದರು ಪೊಲೀಸರಿಗೆ ಹಸ್ತಾಂತರಿಸಲಾಗಿದೆ.


Spread the love