Home Mangalorean News Kannada News ಹಿಂದೂ ಕಾರ್ಯಕರ್ತರನ್ನು ದಮನಿಸಲು ಹೊರಟ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ

ಹಿಂದೂ ಕಾರ್ಯಕರ್ತರನ್ನು ದಮನಿಸಲು ಹೊರಟ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ

Spread the love

ಹಿಂದೂ ಕಾರ್ಯಕರ್ತರನ್ನು ದಮನಿಸಲು ಹೊರಟ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ

ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಇಲಾಖೆಯ ಪೂರ್ಣ ವೈಫಲ್ಯದಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗದೇ ಹತಾಶಗೊಂಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂ ಕಾರ್ಯಕರ್ತರನ್ನು ಸುಳ್ಳು ಕೇಸ್ ದಾಖಲಿಸಿ ದಮನಿಸಲು ಹೊರಟಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದೂ ಮುಖಂಡರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ರವರ ಮೇಲೆ ಎಫ್ ಐ ಆರ್ ದಾಖಲಿಸಿ, ಅರುಣ್ ಕುಮಾರ್ ಪುತ್ತಿಲ ರನ್ನು ಗಡೀಪಾರು ಮಾಡಲು ನೋಟಿಸ್ ಜಾರಿ ಮಾಡಿದ್ದು, ಹಿಂದೂ ಕಾರ್ಯಕರ್ತರ ಮನೆಗೆ ರಾತೋರಾತ್ರಿ ಪೊಲೀಸರು ಬಂದು ಜಿ. ಪಿ. ಎಸ್. ಫೋಟೋ ತೆಗೆದು ರೌಡಿಗಳಂತೆ ಬಿಂಬಿಸಿ ಮಾನಸಿಕ ಸ್ಥೈರ್ಯ ಕುಗ್ಗಿಸಲು ಪೊಲೀಸ್ ಇಲಾಖೆ ಮುಂದಾಗಿರುವುದು ಖಂಡನೀಯ.

ಮತಾಂಧ ಶಕ್ತಿಗಳ ಓಲೈಕೆಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರ ಜಿಲ್ಲೆಯ ಪೊಲೀಸ್ ವ್ಯವಸ್ಥೆಯನ್ನು ತಮ್ಮ ಕೈಗೊಂಬೆಯನ್ನಾಗಿಸಿಕೊಂಡು ಹಿಂದೂ ಕಾರ್ಯಕರ್ತರನ್ನು ದಮನಿಸಲು ಮುಂದಾಗಿದೆ.

ಜಿಲ್ಲೆಯಲ್ಲಿ ಅವ್ಯಾಹತವಾಗಿರುವ ಡ್ರಗ್ಸ್ ದಂಧೆ, ಲವ್ ಜೆಹಾದ್, ಅಕ್ರಮ ಗೋ ಸಾಗಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಂಪೂರ್ಣವಿಫಲವಾಗಿರುವ ಪೊಲೀಸ್ ಇಲಾಖೆ, ಕೇವಲ ಕಾಂಗ್ರೆಸ್ ಹಾಗೂ ಎಸ್ ಡಿ ಪಿ ಐ ಮುಖಂಡರ ಅಣತಿಯಂತೆ ಹಿಂದೂ ಕಾರ್ಯಕರ್ತರನ್ನು ಸುಳ್ಳು ಕೇಸ್ ಮೂಲಕ ಜೈಲುಪಾಲು ಮಾಡಲು ಮುಂದಾಗಿದೆ.

ಕಾಂಗ್ರೆಸ್ ಸರ್ಕಾರ ತಕ್ಷಣ ತನ್ನ ಈ ಹಿಂದೂ ವಿರೋಧಿ ನಿಲುವು ಹಾಗೂ ಹಿಂದೂ ಕಾರ್ಯಕರ್ತರನ್ನು ದಮನಿಸುವ ಪ್ರಯತ್ನವನ್ನು ಕೈಬಿಟ್ಟು, ಕರಾವಳಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಮುಂದಾಗಬೇಕು, ಕಾಂಗ್ರೆಸ್ ಸರ್ಕಾರ ಇದೇ ಪ್ರವೃತ್ತಿ ಮುಂದುವರಿಸಿದರೆ ಬೀದಿಗಿಳಿದು ಹೋರಾಟ ಮಾಡುವ ಸನ್ನಿವೇಶ ನಿರ್ಮಾಣವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.


Spread the love

Exit mobile version