ಹಿರಿಯ ಸಾಹಿತಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಎಸ್.ಎಲ್.ಭೈರಪ್ಪ ನಿಧನ

Spread the love

ಹಿರಿಯ ಸಾಹಿತಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಎಸ್.ಎಲ್.ಭೈರಪ್ಪ ನಿಧನ

ಬೆಂಗಳೂರು: ಹಿರಿಯ ಸಾಹಿತಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಎಸ್.ಎಲ್.ಭೈರಪ್ಪ(94) ಬುಧವಾರ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ವಂಶ ವೃಕ್ಷ, ನಾಯಿ ನೆರಳು, ಪರ್ವ, ಗೃಹಭಂಗ, ಗ್ರಹಣ, ಉತ್ತರಾಖಂಡ ಸೇರಿದಂತೆ 25 ಕಾದಂಬರಿಗಳನ್ನು ಬರೆದಿರುವ ಭೈರಪ್ಪನವರು, ಪದ್ಮಭೂಷಣ, ನಾಡೋಜ ಪ್ರಶಸ್ತಿ, ಪಂಪ ಪ್ರಶಸ್ತಿ, ಸರಸ್ವತಿ ಸಮ್ಮಾನ್ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಸಹಿತ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ಭೀಮಕಾಯ, ಬೆಳಕು ಮೂಡಿತು, ಧರ್ಮಶ್ರೀ, ದೂರ ಸರಿದರು, ಮತದಾನ, ವಂಶವೃಕ್ಷ, ಜಲಪಾತ, ನಾಯಿ ನೆರಳು, ತಬ್ಬಲಿಯು ನೀನಾದೆ ಮಗನೆ, ಗೃಹಭಂಗ, ನಿರಾಕರಣ, ಗ್ರಹಣ, ದಾಟು, ಅನ್ವೇಷಣ, ಪರ್ವ, ನೆಲೆ, ಸಾಕ್ಷಿ, ಅಂಚು, ತಂತು, ಸಾರ್ಥ, ಮಂದ್ರ, ಆವರಣ, ಕವಲು, ಯಾನ, ಉತ್ತರಕಾಂಡ.

ಭಿತ್ತಿ (ಆತ್ಮಚರಿತ್ರೆ), ಸತ್ಯ ಮತ್ತು ಸೌಂದರ್ಯ (ಪಿ.ಎಚ್.ಡಿ ಪ್ರಬಂಧ), ಸಾಹಿತ್ಯ ಮತ್ತು ಪ್ರತೀಕ, ಕಥೆ ಮತ್ತು ಕಥಾವಸ್ತು, ಸಂದರ್ಭ: ಸಂವಾದ, ನಾನೇಕೆ ಬರೆಯುತ್ತೇನೆ?


Spread the love
Subscribe
Notify of

0 Comments
Inline Feedbacks
View all comments