ಹುಲಿವೇಷ ತಂಡದ ಮುಖ್ಯಸ್ಥ ಅಶೋಕ್ ರಾಜ್ ಕಾಡಬೆಟ್ಟು ನಿಧನ

Spread the love

 ಹುಲಿವೇಷ ತಂಡದ ಮುಖ್ಯಸ್ಥ ಅಶೋಕ್ ರಾಜ್ ಕಾಡಬೆಟ್ಟು ನಿಧನ

ಉಡುಪಿ: ಹೆಸರಾಂತ ಹುಲಿವೇಷದಾರಿ, ಮುಖ್ಯಸ್ಥರಾದ ಅಶೋಕ್ ರಾಜ್ ಕಾಡಬೆಟ್ಟು ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಸಂಜೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಉಡುಪಿಯ ಕಾಡಬೆಟ್ಟುವಿನಲ್ಲಿ ಹುಲಿವೇಷ ತಂಡವನ್ನು ಕಟ್ಟಿ ಟೈಗರ್ ಕಿಂಗ್ ಎಂದೇ ಖ್ಯಾತಿ ಪಡೆದಿದ್ದರು. 2023 ಅಕ್ಟೋಬರ್ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿ ಹುಲಿವೇಷ ಕಾರ್ಯಕ್ರಮ ನೀಡುತಿದ್ದ ಸಂಧರ್ಭದಲ್ಲಿ ಅಸ್ವಸ್ಥರಾಗಿದ್ದ ಅಶೋಕ್ ರಾಜ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆ ಬಳಿಕ ಉಡುಪಿ ಮತ್ತು ಮಣಿಪಾಲದ ಆಸ್ಪತ್ರೆಯ ಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿತ್ತು. ಗುರುವಾರ ಸಂಜೆ ವೇಳೆ ಅವರು ನಿಧನರಾಗಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಹುಲಿವೇಷ ಧರಿಸಿ ಅಷ್ಟಮಿ, ಮತ್ತು ಇನ್ನಿತರ ಸಂಧರ್ಭದಲ್ಲಿ ತಮ್ಮ ತಂಡದೊಂದಿಗೆ ಅವರು ಜನರಿಗೆ ಮನರಂಜಿಸುತಿದ್ದರು.


Spread the love