ಹೃದಯಾಘಾತದಿಂದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

Spread the love

ಹೃದಯಾಘಾತದಿಂದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ಇಂದು (ಏಪ್ರಿಲ್ 16) ನಿಧನ ಹೊಂದಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು.

ದ್ವಾರಕೀಶ್ ಅವರ ನಿಧನವಾರ್ತೆ ತಿಳಿಯುತ್ತಿದ್ದಂತೆ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಹಾಗೂ ಅವರ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

‘ರಾತ್ರಿ ಲೂಸ್ ಮೋಷನ್ ಆಯ್ತು. ರಾತ್ರಿ ನಿದ್ದೆ ಮಾಡಿರಲಿಲ್ಲ. ಬೆಳಿಗ್ಗೆ ಕಾಫಿ ಕುಡಿದು ಎರಡು ಗಂಟೆ ಮಲಗುತ್ತೇನೆ ಎಂದು ನಿದ್ರಿಸಿದ್ದರು. ಮಲಗಿದವರು ಎದ್ದೇ ಇಲ್ಲ. ಅವರಿಗೆ ಹೃದಯಾಘಾತ ಆಗಿದೆ’ ಎಂದು ದ್ವಾರಕೀಶ್ ಪುತ್ರ ಯೋಗಿ ಅವರು   ಮಾಹಿತಿ ನೀಡಿದ್ದಾರೆ.

ದ್ವಾರಕೀಶ್ ಅವರು ನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ನಂತರ ನಿರ್ಮಾಪಕನಾಗಿ, ನಿರ್ದೇಶಕನಾಗಿ ಅವರು ಚಿತ್ರರಂಗದಲ್ಲಿ ಗುರುತಿಸಿಕೊಂಡರು. ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆ ತುಂಬಾನೇ ದೊಡ್ಡದು. ‘ಮಮತೆಯ ಬಂಧನ’ ಅವರ ನಿರ್ಮಾಣದ ಮೊದಲ ಸಿನಿಮಾ. ‘ವೀರ ಸಂಕಲ್ಪ’ ಅವರ ನಟನೆಯ ಮೊದಲ ಸಿನಿಮಾ.


Spread the love

Leave a Reply