Home Mangalorean News Kannada News ಹೆಚ್ಚಿದ ಕಡಲ ಉಬ್ಬರ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಹೆಚ್ಚಿದ ಕಡಲ ಉಬ್ಬರ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ

Spread the love

ಹೆಚ್ಚಿದ ಕಡಲ ಉಬ್ಬರ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಮಂಗಳೂರು: ಉಳ್ಳಾಲದ ಸೋಮೇಶ್ವರ ಉಚ್ಚಿಲ, ಬಟ್ಟಪ್ಪಾಡಿ, ಉಳ್ಳಾಲ ಮೊಗವೀರ ಪಟ್ನ, ಕೈಕೋ, ಹಿಲರಿಯ ನಗರ,ಪ್ರದೇಶಗಳಲ್ಲಿ ಕಡಲಿನ ಅಬ್ಬರ ಜಾಸ್ತಿಯಾಗಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಂಗಳವಾತ ಸ್ಥಳಕ್ಕೆ ಭೇಟಿ ನೀಡಿದರು.

ಬಳಿಕ ಮಾತನಾಡಿದ ಅವರು ಕಡಲಿನ ಅಬ್ಬರ, ತೀವ್ರತೆ ಜಾಸ್ತಿಯಾಗಿರುವ ಹಿನ್ನೆಲೆಯಲ್ಲಿ,ಸರಕಾರದಿಂದ ಯಾವ ಯಾವ ಕಾರ್ಯ ರೂಪಿಸಬೇಕು ಎಂಬುದರ ಕುರಿತು ಜಿಲ್ಲಾಧಿಕಾರಿ ಮತ್ತು ಬಂದರು ಇಲಾಖೆ ಎ.ಡಿ.ಬಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತಡೆಗೋಡೆ ಹೇಗೆ ನಿರ್ಮಿಸುವುದು ಮತ್ತು ತುರ್ತಾಗಿ ಯಾವ ಕಾರ್ಯ ಮಾಡಬೇಕು ಎಂಬುದರ ಬಗ್ಗೆ ನಿರ್ಧರಿಸಲಾಗುವುದು ಎಂದರು.

ಸ್ವಾಭಾವಿಕವಾಗಿ ಕಡಲ್ಕೊರೆತದಿಂದಾಗಿ ಮೀನುಗಾರರಿಗೆ, ಮೀನುಗಾರಿಕಾ ವೃತ್ತಿಯಲ್ಲಿ ತೊಡಗಿರುವ ಅನೇಕ ಕುಟುಂಬಗಳಿಗೆ ತೊಂದರೆ ಆದ ಹಿನ್ನೆಲೆಯಲ್ಲಿ ತುರ್ತಾಗಿ ತಡೆಗೋಡೆ ಮಾಡಬೇಕಾದ ಅಗತ್ಯವಿದೆ. ರೂ. 230 ಕೋಟಿ ಅನುದಾನದಲ್ಲಿ ಕಡಲ್ಕೊರೆತ ಕಾಮಗಾರಿಯು ಪ್ರಗತಿಯಲ್ಲಿದೆ, ಒಟ್ಟಾರೆಯಾಗಿ ಮೀನುಗಾರರು ಸಂಕಷ್ಟದಿಂದ ಪಾರಾಗಬೇಕೆಂಬುದು ಸರಕಾರದ ಆಶಯವಾಗಿದೆ ಎಂದು ಸಚಿವರು ತಿಳಿಸಿದರು.

ದ.ಕ.ಜಿ.ಪಂ.ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ, ಮುಖಂಡರಾದ ಚಂದ್ರಹಾಸ್ ಉಳ್ಳಾಲ್, ಸಂತೋಷ್ ಕುಮಾರ್ ರೈ ಬೋಳಿಯಾರ್, ಚಂದ್ರಹಾಸ್ ಪಂಡಿತ್ ಹೌಸ್, ಹೇಮಂತ್ ಶೆಟ್ಟಿ, ಚಂದ್ರಶೇಖರ್ ಉಚ್ಚಿಲ್, ರವೀಂದ್ರ ಶೆಟ್ಟಿ ಉಳಿದೊಟ್ಟು, ಸೋಮೇಶ್ವರ ಪುರಸಭೆ ಅಧ್ಯಕ್ಷರಾದ ರಾಜೇಶ್ ಉಚ್ಚಿಲ್, ತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ಆಳ್ವ, ತಾಲೂಕು ಪಂಚಾಯತ್ ಸದಸ್ಯರಾದ ರವಿಶಂಕರ್ ಸೋಮೇಶ್ವರ, ನವೀನ್ ಪಾದಲ್ಪಾಡಿ, ಸೋಮೇಶ್ವರ ಪುರಸಭಾ ಆಯುಕ್ತರಾದ ವಾಣಿ ಆಳ್ವ, ಉಳ್ಳಾಲ ನಗರಸಭಾ ಆಯುಕ್ತರಾದ ರಾಯಪ್ಪ ಉಪಸ್ಥಿತರಿದ್ದರು.


Spread the love

Exit mobile version