ಹೆಬ್ರಿ: ಕತ್ತಿಯಿಂದ ಕಡಿದು ಗಂಡನನ್ನು ಕೊಲೆ ಮಾಡಿದ ಹೆಂಡತಿ
ಉಡುಪಿ: ಮದ್ಯಪಾನ ಮಾಡಿಕೊಂಡು ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಪತಿಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಹೆಬ್ರಿ ನಿವಾಸಿ ಗಣಪತಿ ಎಂದು ಗುರುತಿಸಲಾಗಿದೆ. ಆರೋಪಿ ಪತ್ನಿ ಜಯಂತಿಯನ್ನು ಪೊಲೀಸರು ಬಂಧಿಸಿದ್ದಾರೆ,
ಮೃತ ಗಣಪತಿಗೆ ಮದ್ಯಪಾನ ಮಾಡುವ ಅಭ್ಯಾಸವಿದ್ದು ಪ್ರತಿದಿನ ಕುಡಿದು ಬಂದು ಪತ್ನಿಯೊಂದಿಗೆ ಜಗಳವಾಡುತ್ತಿದ್ದು, ಬುಧವಾರ ಮಧ್ಯಾಹ್ನ ಕೂಡ ಗಣಪತಿ ಅತನ ಹೆಂಡತಿ ಜಯಂತಿಯೊಂದಿಗೆ ಕುಡಿಯಲು ಹಣ ಕೇಳಿದ ವಿಚಾರದಲ್ಲಿ ಗಲಾಟೆ ಮಾಡಿಕೊಂಡಿದ್ದು ಪತ್ನಿ ಜಯಂತಿ ಗಣಪತಿಯನ್ನು ಕತ್ತಿಯಿಂದ ಕಡಿದಿದ್ದು ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾನೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ : 24/2025 ಕಲಂ. 103 BNS ರಂತೆ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ತನಿಖೆ ಮುಂದುವರೆದಿರುತ್ತದೆ.