ಹೈಡ್ರೊವೀಡ್ ಗಾಂಜಾ ಮಾರಾಟ ಯತ್ನ: ವಿದ್ಯಾರ್ಥಿನಿ ಬಂಧನ, ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ

Spread the love

ಹೈಡ್ರೊವೀಡ್ ಗಾಂಜಾ ಮಾರಾಟ ಯತ್ನ: ವಿದ್ಯಾರ್ಥಿನಿ ಬಂಧನ, ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ

ಮಂಗಳೂರು: ಹೈಡ್ರೊವೀಡ್ ಗಾಂಜಾ ಮಾದಕ ದ್ರವ್ಯವನ್ನು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಆರೋಪಿತೆಯನ್ನು ಬಂಧಿಸಿರುವ ಮುಲ್ಕಿ ಪೊಲೀಸರು, ಸುಮಾರು ₹35 ಲಕ್ಷ ಮೌಲ್ಯದ 1 ಕೆಜಿ 42 ಗ್ರಾಂ ಹೈಡ್ರೊವೀಡ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಮೇ 12, 2026ರಂದು ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಸುಹಾನಾ (21) ಎಂಬಾಕೆಯನ್ನು ವಶಕ್ಕೆ ಪಡೆದಿದ್ದಾರೆ. ಆಕೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುಲಿದೇವರ ಬನ ನಿವಾಸಿಯಾಗಿದ್ದು, ಪ್ರಸ್ತುತ ಕುಂದಾಪುರದ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿನಿಯಾಗಿದ್ದಾಳೆ ಎಂದು ತಿಳಿದುಬಂದಿದೆ.

ಆರೋಪಿತೆಯ ಬಳಿ ಇದ್ದ ಸುಮಾರು ₹35,00,000 ಮೌಲ್ಯದ 1 ಕೆಜಿ 42 ಗ್ರಾಂ ಹೈಡ್ರೊವೀಡ್ ಗಾಂಜಾ, ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್ ಹಾಗೂ ಇತರೆ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪ್ರಾಥಮಿಕ ವಿಚಾರಣೆಯಲ್ಲಿ ಆರೋಪಿತೆ ಚೆನ್ನೈನಿಂದ ಮಾದಕ ವಸ್ತುವನ್ನು ತಂದು ಮಂಗಳೂರಿನಲ್ಲಿ ಅಕ್ರಮವಾಗಿ ಪೂರೈಕೆ ಮಾಡಿ ಹಣ ಗಳಿಸುವ ಉದ್ದೇಶ ಹೊಂದಿದ್ದಳು ಎಂಬುದು ತಿಳಿದುಬಂದಿದೆ.

ಈ ಸಂಬಂಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 32/2026ರಡಿ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(ಸಿ) ಮತ್ತು 20(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪಣಂಬೂರು ಎಸಿಪಿ ತಂಡ ಹಾಗೂ ಮುಲ್ಕಿ ಠಾಣೆ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ.

ಆರೋಪಿತೆಯ ವಿರುದ್ಧ ಈ ಹಿಂದೆ ಕೂಡ ಕೆಳಕಂಡ ಪ್ರಕರಣಗಳು ದಾಖಲಾಗಿವೆ:

ಕಾವೂರು ಪೊಲೀಸ್ ಠಾಣೆ ಅ.ಕ್ರ. 37/2026 – ಕಲಂ 8(C), 22(C) ಎನ್‌ಡಿಪಿಎಸ್ ಕಾಯ್ದೆ.
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕಸ್ಟಮ್ಸ್ O.R. No: 177/2025-26 – ಕಲಂ 20(b), 2(B), 23(b), 27(A) ಹಾಗೂ 29 ಎನ್‌ಡಿಪಿಎಸ್ ಕಾಯ್ದೆ.


Spread the love
Subscribe
Notify of

0 Comments
Inline Feedbacks
View all comments