ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ: ಅರ್ಜಿ ಆಹ್ವಾನ

Spread the love

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ: ಅರ್ಜಿ ಆಹ್ವಾನ

ಮಂಗಳೂರು:  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆ-2026 ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ “ಹೊಯ್ಸಳ” ಮತ್ತು ಬಾಲಕಿಯರಿಗಾಗಿ “ಕೆಳದಿ ಚೆನ್ನಮ್ಮ” ಶೌರ್ಯ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ.

ಪ್ರಕರಣವು 2025 ರ ಆಗಸ್ಟ್ 1 ರಿಂದ 2026 ರ ಜುಲೈ 31 ರೊಳಗೆ ನಡೆದಿರಬೇಕು. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ. 10 ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ.

ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25 ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ 1 ಲಕ್ಷ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುತ್ತದೆ.

ಮಕ್ಕಳ ದಿನಾಚರಣೆ 2026ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ನಗರದ ಮೆಸ್ಕಾಂ ಬಳಿ ಇರುವ ಜಿಲ್ಲಾss ಸ್ತ್ರೀಶಕ್ತಿ ಭವನದ 2ನೇ ಮಹಡಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ ಆಗಸ್ಟ್ 14 ರೊಳಗೆ ಸಲ್ಲಿಸಬೇಕು. ಅರ್ಜಿಗಳನ್ನು ಕನ್ನಡ ಭಾಷೆಯಲ್ಲಿಯೇ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿ ಮತ್ತು ಅರ್ಜಿ ನಮೂನೆಗಳಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0824-2451254) ಸಂಪರ್ಕಿಸಬಹ್ಮದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments