09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ: ಜಾಮೀನು ಷರತ್ತು ಉಲ್ಲಂಘನೆಗೆ ಮತ್ತೊಂದು ಪ್ರಕರಣ ದಾಖಲು

Spread the love

09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ: ಜಾಮೀನು ಷರತ್ತು ಉಲ್ಲಂಘನೆಗೆ ಮತ್ತೊಂದು ಪ್ರಕರಣ ದಾಖಲು

ಪುತ್ತೂರು: ನ್ಯಾಯಾಲಯದಲ್ಲಿ ಷರತ್ತುಬದ್ದ ಜಾಮೀನು ಪಡೆದು ವಿಚಾರಣೆಗೆ ಹಾಜರಾಗದೇ ಸುಮಾರು 09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಪುತ್ತೂರು ನಗರ ಪೊಲೀಸ್ ಠಾಣೆಯ ಅ.ಕ್ರ: 51/2012 ಹಾಗೂ ಅ.ಕ್ರ: 52/2012 ಪ್ರಕರಣಗಳಲ್ಲಿ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಪುತ್ತೂರು ಕಸಬಾ ಗ್ರಾಮದ ನಿವಾಸಿ ಅಬ್ಬಾಸ್ ಆಲಿ ಆಲ್ತಾಫ್ (55) (ಪ್ರಸ್ತುತ ವಾಸ: ಪದವು, ಮಂಗಳೂರು) ಎಂಬಾತನನ್ನು ಮಂಗಳೂರು ಜಿಲ್ಲೆಯ ಕುಲಶೇಖರದ ಬಿಕರ್ನಕಟ್ಟೆ ಪ್ರದೇಶದಲ್ಲಿ ದಸ್ತಗಿರಿ ಮಾಡಲಾಗಿದೆ.

ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ದಿನಾಂಕ 27.02.2026ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಇದೇ ವೇಳೆ, ನ್ಯಾಯಾಲಯದಲ್ಲಿ ಷರತ್ತುಬದ್ದ ಜಾಮೀನು ಪಡೆದು ಬಳಿಕ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿರುವ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 18/2026, ಕಲಂ 269 (BNS 2023)ರಡಿ ಮತ್ತೊಂದು ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love