10 ವರ್ಷಗಳಿಂದ ತಲೆಮರೆಸಿಕೊಂಡಿದ್ದ LPC ಆರೋಪಿಯ ಬಂಧನ
ಮಂಗಳೂರು: ಸುಮಾರು 10 ವರ್ಷಗಳಿಂದ ದಸ್ತಗಿರಿಗೆ ಸಿಗದೆ ತಲೆಮರೆಸಿಕೊಂಡಿದ್ದ LPC ಆರೋಪಿಯನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಂಗಳೂರು ಕುದ್ರೋಳಿ ಕರ್ಬಲಾ ರಸ್ತೆಯ ಇಂಪೀರಿಯಲ್ ಹೋಟೆಲ್ ನಿವಾಸಿ ನೌಫಾಲ್ (34), ಹೈದರ್ ಅವರ ಪುತ್ರ, ಎಂಬಾತನ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ಪ್ರಕರಣ ದಾಖಲಾಗಿತ್ತು.
ಮಂಗಳೂರು ದಕ್ಷಿಣ ಪೊಲೀಸ್ ಠಾಣೆ CR No.184/2016ರಲ್ಲಿ ಭಾರತೀಯ ದಂಡ ಸಂಹಿತೆ (IPC) ಕಲಂ 143, 147, 341, 353, 504, 506 ಹಾಗೂ 149ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಬಳಿಕ ಆರೋಪಿಯು ದಸ್ತಗಿರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಆತನ ವಿರುದ್ಧ Absconding Chargesheet ಸಲ್ಲಿಸಲಾಗಿತ್ತು.
ಸುಮಾರು 10 ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಕುದ್ರೋಳಿ ಜಂಕ್ಷನ್ ಬಳಿ ದಸ್ತಗಿರಿ ವಾರಂಟ್ ಆಧಾರದ ಮೇಲೆ ಆತನನ್ನು ವಶಕ್ಕೆ ಪಡೆದಿದ್ದಾರೆ.
ಕಾರ್ಯಾಚರಣೆಯಲ್ಲಿ HC 465, HC 610, HC 382 ಹಾಗೂ PC 2367 ಅವರು ಭಾಗವಹಿಸಿದ್ದರು. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ಜಾಮೀನು ಮಂಜೂರು ಮಾಡಿ ಬಿಡುಗಡೆಗೊಳಿಸಿದೆ.
