
Spread the love
14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು: 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಂಟ್ವಾಳ ನಿವಾಸಿ ಅಬ್ದುಲ್ ಅಜೀಜ್ (45) ಎಂದು ಗುರುತಿಸಲಾಗಿದೆ.
ಆರೋಪಿಯ ವಿರುದ್ದ ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಹಾಸನ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಒಟ್ಟು 10 ಪ್ರಕರಣಗಳು ಭಾಗಿಯಾಗಿದ್ದು ಕೋಣಾಜೆ ಠಾಣಾ ಪ್ರಕರಣದಲ್ಲಿ ಜಾಮೀನು ರಹಿತ ವಾರಂಟ್ ಇದ್ದು ಮಾರ್ಚ್ 23ರಂದು ಮಂಗಳೂರು ಪೊಲೀಸ್ ಆಯುಕ್ತರ ಆದೇಶದ ಮೇರೆಗೆ ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಧನ್ಯ ಎನ್ ನಾಯಕರವರ ನಿರ್ದೇಶನದಂತೆ ಕೊಣಾಜೆ ಪೊಲೀಸ್ ಠಾಣೆಯ ನಿರೀಕ್ಷಕರಾದ ಕೀರ್ತಿಕುಮಾರ್, ಪೊಲೀಸ್ ಉಪನಿರೀಕ್ಷಕರಾದ ಅಶೋಕ್, ಸಿಬಂದಿಗಳಾದ ಶಿವಕುಮಾರ್, ಪುರುಷೋತ್ತಮ ರವರ ತಂಡ ಬಂಧಿಸಿದೆ
Spread the love