14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Spread the love

14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಂಗಳೂರು ನ್ಯೂಚಿತ್ರಾ ಟಾಕೀಸ್ ಬಳಿಯ ರಾಜೇಶ್ (52) ಎಂದು ಗುರುತಿಸಲಾಗಿದೆ.

ಆರೋಪಿಯು 14 ವರ್ಷಗಳಿಂದ ತಲೆಮರೆಸಿಕೊಂಡಿದ್ದು ಮಂಗಳವಾರ ಕಾಸರಗೋಡಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗೆ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.


Spread the love