15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ದಸ್ತಗಿರಿ
ವಿಟ್ಲ: ಬ್ಯಾಂಕ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಇಬ್ಬರಿಂದ ಹಣ ಪಡೆದು ಉದ್ಯೋಗ ಕೊಡಿಸದೆ ಹಾಗೂ ಹಣವನ್ನೂ ಹಿಂದಿರುಗಿಸದೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಮಾರು 15 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ವಿಟ್ಲ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಪುತ್ತೂರು ಬಲ್ಯ ನಿವಾಸಿ ಹಿಬ್ಬಾತುಲ್ಲ (52) ದಸ್ತಗಿರಿಯಾಗಿರುವ ಆರೋಪಿ. ಈತನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಿಬ್ಬಾತುಲ್ಲನನ್ನು ಅಕ್ಟೋಬರ್ 5, 2026ರಂದು ವಿಟ್ಲ ಠಾಣೆಯ ಸಿಬ್ಬಂದಿಗಳಾದ ಶಿವಾನಂದ ಮಡ್ಡಿ, ಶಿದ್ದಪ್ಪ ಹಾಗೂ ಯಂಕಪ್ಪ ಅವರು ದಸ್ತಗಿರಿ ಮಾಡಿದ್ದಾರೆ.
ದಸ್ತಗಿರಿ ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.













