17ರಂದು ಪುತ್ತೂರಿನ ಮುರದಲ್ಲಿ ಜಿಲ್ಲಾಧಿಕಾರಿಯವರ ಗ್ರಾಮ ವಾಸ್ತವ್ಯ

Spread the love

17ರಂದು ಪುತ್ತೂರಿನ ಮುರದಲ್ಲಿ ಜಿಲ್ಲಾಧಿಕಾರಿಯವರ ಗ್ರಾಮ ವಾಸ್ತವ್ಯ

ಮಂಗಳೂರು,ಸೆ.14(ಕ.ವಾ):–  ತಿಂಗಳ ಮೂರನೇ ಶನಿವಾರವಾದ ಸೆ.17ರ ಬೆಳಿಗ್ಗೆ 11 ಗಂಟೆಯಿಂದ ಪುತ್ತೂರು ತಾಲೂಕಿನ ಕಬಕ ಗ್ರಾಮದ ಮುರ ಎಂಬಲ್ಲಿರುವ ಗೌಡ ಸಮುದಾಯ ಭವನದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಗ್ರಾಮ ವಾಸ್ತವ್ಯ ಮಾಡುವರು.

ಈ ಸಂದರ್ಭದಲ್ಲಿ ಅಲ್ಲಿನ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಕೆಲವೊಂದು ಸಮಸ್ಯೆಗಳನ್ನು ಆದಷ್ಟು ಸ್ಥಳದಲ್ಲಿಯೇ ಬಗೆಹರಿಸಲು ಉದ್ದೇಶಿಸಿರುತ್ತಾರೆ, ಕಾರಣ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

17 ರಂದು ಗ್ರಾಮ ವಾಸ್ತವ್ಯ

ಮಂಗಳೂರು,ಸೆ.14(ಕ.ವಾ):- ತಾಲೂಕಿನ ಸುರತ್ಕಲ್ ಹೋಬಳಿಯ ಬಾಳ ಮತ್ತು ಕಳವಾರು ಗ್ರಾಮದಲ್ಲಿ ಸೆ.17ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಗ್ರಾಮ ವಾಸ್ತವ್ಯ ಹಮ್ಮಿಕೊಳ್ಳಲಾಗಿದೆ ಎಂದು ಮಂಗಳೂರು ತಾಲೂಕು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಆಹ್ವಾನ

ಮಂಗಳೂರು,ಸೆ.14(ಕ.ವಾ):– ಬಂಟ್ವಾಳ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ಹುದ್ದೆಗೆ ಮಾಸಿಕ 6000ರೂ.ಗಳ ಗೌರವಧನದೊಂದಿಗೆ ಆಸಕ್ತ ವಿಕಲಚೇತನದಿಂದ ಅರ್ಜಿ ಆಹ್ವಾನಿಸಲಾಗಿದೆ.

ಕಳ್ಳಿಗೆ, ಕಜೀರು, ಕಾವಳ, ಮೂಡೂರು, ಸಜಿಪನಡು, ಬಡದ, ಕಜೆಕಾರು ಗ್ರಾಮ ಪಂಚಾಯತ್‍ಗಳಲ್ಲಿ ಹುದ್ದೆ ಖಾಲಿ ಇದ್ದು ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣ /ಅನುತ್ತೀರ್ಣರಾದ ವಿಕಲಚೇತನರು   ಅ.10ರೊಳಗೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ ಬಂಟ್ವಾಳ, ಕೈಕುಂಜೆ, ಬಿಸಿರೋಡ್, ಬಂಟ್ವಾಳ ಈ ಕಚೇರಿಗೆ ಸಲ್ಲಿಸಬಹುದು ಎಂದು ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

20ರಂದು ಜಮಾಬಂಧಿ

ಮಂಗಳೂರು,ಸೆ.14(ಕ.ವಾ):- ಉಳ್ಳಾಲ ತಾಲೂಕಿನ ಹರೇಕಳ ಗ್ರಾಮ ಪಂಚಾಯತ್‍ನ 2021-22ನೇ ಸಾಲಿನ ಜಮಾ ಬಂಧಿ ಇದೇ ಸೆ.20ರ ಬೆಳಿಗ್ಗೆ 11 ಗಂಟೆಗೆ ಪಂಚಾಯತ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಆಹ್ವಾನ

ಮಂಗಳೂರು,ಸೆ.14(ಕ.ವಾ):- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಲ್ಲಿ ಶಿಶಿಕ್ಷು ತರಬೇತಿ ಪಡೆಯಲು ಇಚ್ಚಿಸುವ ಎಸ್‍ಎಸ್‍ಎಲ್‍ಸಿ ಅಥವಾ ಐಟಿಐನಲ್ಲಿ ಮೆಕ್ಯಾನಿಕ್ ಡಿಸೇಲ್, ಮೆಕ್ಯಾನಿಕ್ ಆಟೋ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರೋನಿಕ್ಸ್, ಮೆಷಿನಿಷ್ಟ್, ಎಲೆಕ್ಟ್ರೋನಿಕ್ಸ್ ಮೆಕ್ಯಾನಿಕಲ್, ವೆಲ್ಡರ್, ಮೆಕ್ಯಾನಿಕಲ್ ಮೋಟಾರ್ ವೆಹಿಕಲ್, ಮೆಕ್ಯಾನಿಕಲ್ ವೆಹಿಕಲ್ ಬಾಡಿ ಬಿಲ್ಡರ್, ಪ್ರೋಗ್ರಾಮಿಂಗ್ ಮತ್ತು ಸಿಸ್ಟಮ್ ಎಡ್ಮಿನಿಸ್ಟ್ರೇಟಿವ್ ಅಸಿಸ್ಟೆಟ್ಸ್‍ನಲ್ಲಿ  ತೇರ್ಗಡೆಯಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಪೂರಕ ದಾಖಲೆಗಳೊಂದಿಗೆ ಸೆ.24ರೊಳಗೆ ನಗರದ ಬಿಜೈನಲ್ಲಿರುವ ಕರಾರಸಾನಿ ವಿಭಾಗಿಯ ಕಚೇರಿಗೆ ಸಲ್ಲಿಸಿ ಸೆ.26ರ ಬೆಳಿಗ್ಗೆ 10 ಗಂಟೆಗೆ ಕಚೇರಿಯಲ್ಲಿ ನಡೆಯುವ ಶಿಶಿಕ್ಷು ಸಮಿತಿಯ ನೇರ ಸಂದರ್ಶನದಲ್ಲಿ ಭಾಗವಹಿಸುವಂತೆ ಕ.ರಾ.ರ.ಸಾ.ನಿ.ಯ ಹಿರಿಯ ವಿಭಾಗಿಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾg


Spread the love