Home Mangalorean News Kannada News ವಿಟ್ಲ| ರೂ.1.79 ಲಕ್ಷ ಮೌಲ್ಯದ ಎಂಡಿಎಂಎ ವಶ: ನಾಲ್ವರು ಆರೋಪಿಗಳ ಬಂಧನ

ವಿಟ್ಲ| ರೂ.1.79 ಲಕ್ಷ ಮೌಲ್ಯದ ಎಂಡಿಎಂಎ ವಶ: ನಾಲ್ವರು ಆರೋಪಿಗಳ ಬಂಧನ

Spread the love

ವಿಟ್ಲ| ರೂ.1.79 ಲಕ್ಷ ಮೌಲ್ಯದ ಎಂಡಿಎಂಎ ವಶ: ನಾಲ್ವರು ಆರೋಪಿಗಳ ಬಂಧನ

ವಿಟ್ಲ: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿ, ಸುಮಾರು ರೂ.1,79,700 ಮೌಲ್ಯದ 17.97 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುವ ಘಟನೆ ವರದಿಯಾಗಿದೆ.

ಮಾಹಿತಿಯ ಪ್ರಕಾರ, ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ನೇರಳಕಟ್ಟೆ ಇಂದಿರಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಶ್ರಫ್ ಜಿ ಎಂಬಾತನು ತನ್ನ ಮನೆಯಲ್ಲಿ ಮಾದಕ ವಸ್ತುವಾದ ಎಂಡಿಎಂಎ ಸಂಗ್ರಹಿಸಿ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ (ತನಿಖೆ–1) ರತ್ನಕುಮಾರ್ ಎಂ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ದಾಳಿ ನಡೆಸಿದರು.

ಈ ವೇಳೆ ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ಎಂಬಲ್ಲಿ ಅಶ್ರಫ್ ಜಿ (38) ವಾಸವಿದ್ದ ಮನೆಯನ್ನು ಪರಿಶೀಲಿಸಿದಾಗ, ಅಶ್ರಫ್ ಜಿ ಜೊತೆಗೆ ಹಫೀಝ್ ಯಾನೆ ಅಪ್ಪಿ, ಅಫ್ವಾನ್ ಹಾಗೂ ಅಶ್ರಫ್ ಎನ್.ಎ. ಅವರು ಇದ್ದರು.

ಮನೆಯ ಪರಿಶೀಲನೆಯ ವೇಳೆ ಒಟ್ಟು 17.97 ಗ್ರಾಂ ತೂಕದ ಸುಮಾರು ರೂ.1,79,700 ಮೌಲ್ಯದ ಎಂಡಿಎಂಎ ಮಾದಕ ವಸ್ತು, ಒಂದು ಚೂರಿ ಹಾಗೂ ಇತರ ವಸ್ತುಗಳು ಪತ್ತೆಯಾಗಿದ್ದು, ಪೊಲೀಸರು ಅವುಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 61/2026ರಡಿ ಎನ್ಡಿಪಿಎಸ್ ಕಾಯ್ದೆ 1985ರ ಕಲಂ 8(C), 22(C) ಹಾಗೂ ಆರ್ಮ್ಸ್ ಕಾಯ್ದೆಯ ಕಲಂ 27ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

Exit mobile version