ಉಜಿರೆ : ಮುಂಡಾಜೆ ಶತಾಬ್ದಿ ವಿದ್ಯಾಲಯ ಸಮಿತಿ ವತಿಯಿಂದ ವಾರ್ಷಿಕ ಕ್ರೀಡಾಕೂಟ

Spread the love

ಉಜಿರೆ : ಮುಂಡಾಜೆಯ ಶತಾಬ್ದಿ ವಿದ್ಯಾಲಯ ಸಮಿತಿಯ ಆಡಳಿತಕ್ಕೊಳಪಟ್ಟ ಸರಸ್ವತಿ ಆಂಗ್ಲಮಾಧ್ಯಮ ಶಾಲೆ, ಮುಂಡಾಜೆಯ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳ ವಾರ್ಷಿಕ ಕ್ರೀಡಾಕೂಟ “ಭಿಡೆ ನಾರಾಯಣ ಭಟ್ ಕ್ರೀಡಾಂಗಣ”ದಲ್ಲಿ ಇತ್ತೀಚೆಗೆ ನಡೆಯಿತು. ಉಜಿರೆ ಉದ್ಯಮಿ ಉಮೇಶ್ ಶೆಟ್ಟಿ ಪಥ ಸಂಚಲನ ಹಾಗೂ ಶತಾಬಿ ವಿದ್ಯಾಲಯ ಸಮಿತಿಯ ಖಜಾಂಚಿ ಶ್ರೀಮತಿ ಮಾಲಿನಿ ಎಸ್. ಭಿಡೆ ಕ್ರೀಡಾಕೂಟ ಉದ್ಘಾಟಿಸಿದರು. ಸಮಿತಿಯ ಅಧ್ಯಕ್ಷ ಶ್ರೀಧರ ಜಿ. ಭಿಡೆ ಅಧ್ಯಕ್ಷತೆ ವಹಿಸಿದ್ದರು.
ಈ ಪ್ರಯುಕ್ತ ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳ ಆಕರ್ಷಕ ಮೆರವಣಿಗೆ ನಡೆಯಿತು. ಉಜಿರೆ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಶ್ರುತಿ ಜೈನ್, ಪುತ್ತೂರು ಸರಕಾರಿ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಕ ಜಗನ್ನಾಥ ರೈ, ಸೋಮಂತಡ್ಕದ ಯಂಗ್ ಚಾಲೆಂಜರ್ಸ್ ಕ್ರೀಡಾಸಂಘದ ಸಂಚಾಲಕ ನಾಮದೇವ ರಾವ್, ಮುಂಡಾಜೆ ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ತೋಮಸ್ ವಿ. ಡಿ., ಉಜಿರೆ ರಬ್ಬರ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಾಧಿಕಾರಿ ರಾಜು ಶೆಟ್ಟಿ ವಾರ್ಷಿಕ ಕ್ರೀಡಾಕೂಟದ ಮುಖ್ಯ ಅತಿಥಿಗಳಾಗಿದ್ದರು.
ಇದೇ ವೇಳೆ ರಾಜ್ಯ-ರಾಷ್ಟ್ರಮಟ್ಟದಲ್ಲಿ ಸಂಸ್ಥೆಯನ್ನು ಪ್ರತಿನಿಧಿಸಿದ ಕ್ರೀಡಾವಿದ್ಯಾರ್ಥಿಗಳನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ನಂತರ ಸಂಸ್ಥೆಯ ವಿದ್ಯಾರ್ಥಿಗಳಿಗಾಗಿ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆದವು.


Spread the love