2ನೇ ಹಂತದ ಗ್ರಾಪಂ ಚುನಾವಣೆ : ಕುಂದಾಪುರದಲ್ಲಿ ಶಾಂತಿಯುತ ಮತದಾನ

Spread the love

2ನೇ ಹಂತದ ಗ್ರಾಪಂ ಚುನಾವಣೆ : ಕುಂದಾಪುರದಲ್ಲಿ ಶಾಂತಿಯುತ ಮತದಾನ

ಕುಂದಾಪುರ: ತಾಲೂಕಿನ 43 ಗ್ರಾ.ಪಂ.ಗಳಿಗೆ ಭಾನುವಾರ ನಡೆದ ಎರಡನೇ ಹಂತದ ಮತದಾನದಲ್ಲಿ ಎಲ್ಲಾ ಮತಗಟ್ಟೆಗಳಲ್ಲೂ ಬೆಳಗ್ಗಿನಿಂದಲೇ ಮತದಾರರು ಉತ್ಸಾಹದಿಂದಲೇ ಬಂದು ಹಕ್ಕು ಚಲಾಯಿಸಿದ್ದಾರೆ.

????????????????????????????????????
????????????????????????????????????
????????????????????????????????????
????????????????????????????????????

 
 

ಬೆಳಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಶೇ. 61.32 ರಷ್ಟು ಮತದಾನವಾಗಿತ್ತು. ಎರಡನೇ ಹಂತದ ಚುನಾವಣೆಯಲ್ಲಿ ಶಾಸಕರಾದ ಕುಂದಾಪುರದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಬÉೈಂದೂರಿನ ಬಿ.ಎಂ. ಸುಕುಮಾರ್, ಮಾಜಿ ಶಾಸಕರಾದ ಎ.ಜಿ. ಕೊಡ್ಗಿ, ಬಿ. ಅಪ್ಪಣ್ಣ ಹೆಗ್ಡೆ, ಕೆ. ಗೋಪಾಲ ಪೂಜಾರಿ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಅನಿವಾಸಿ ಭಾರತೀಯ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಮತ ಚಲಾಯಿಸಿದ್ದಾರೆ.

ಮತದಾನ ಪ್ರಕ್ರಿಯೆ ಆರಂಭಗೊಂಡ ಸ್ವಲ್ಪ ಹೊತ್ತಲ್ಲೇ ಅಂಪಾರು ಸರ್ಕಲ್ನಲ್ಲಿ ಮತದಾರರನ್ನು ವಾಹನದಲ್ಲಿ ಕರೆ ತರುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ಮಧ್ಯೆ ಬಿರುಸಿನ ವಾಗ್ವಾದ ನಡೆಯಿತು. ಅಭ್ಯರ್ಥಿಗಳ ಪರ ಬೆಂಬಲಿಗರು ತಮ್ಮ ಖಾಸಗಿ ವಾಹನದಲ್ಲಿ ಮತದಾರರನ್ನು ಕರೆ ತರುತ್ತಿರುವುದನ್ನು ನೋಡಿದ ಪ್ರತಿ ಸ್ಪರ್ಧಿ ಅಭ್ಯರ್ಥಿಗಳು ಹಾಗೂ ಬೆಂಬಲಿಗರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ವಾಗ್ವಾದಕ್ಕಿಳಿದರು. ಈ ವೇಳೆ ಎರಡು ಗುಂಪುಗಳ ಮಧ್ಯೆ ಮಾತಿನ ಚಕಮಕಿ ಉಂಟಾದ ಬೆನ್ನಲ್ಲೇ ಸ್ಥಳದಲ್ಲಿ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಗಳು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಇದೇ ರೀತಿ ಸಣ್ಣಪುಟ್ಟ ವಾಗ್ವಾದಗಳು ಅಲ್ಲಲ್ಲಿ ನಡೆದಿದೆ.

ತಾಲೂಕಿನ 43 ಗ್ರಾಮಪಂಚಾಯತ್ಗಳ 554 ಸ್ಥಾನಗಳ ಪೈಕಿ 24 ಕಡೆಗಳಲ್ಲಿ ಅವಿರೋಧ ಆಯ್ಕೆಯಾಗಿದ್ದು, ಉಳಿದ 530 ಸ್ಥಾನಗಳಿಗೆ ಚುನಾವಣೆ ನಡೆದಿದೆ. ಸ್ಪರ್ದಿಸಿರುವ 1,262 ಮಂದಿ ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ.


Spread the love