2 ದಿನ ಭಾರತ್​ ಬಂದ್​: ದಕ ಮತ್ತು ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ

Spread the love

2 ದಿನ ಭಾರತ್​ ಬಂದ್​: ದಕ ಮತ್ತು ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ

ಉಡುಪಿ: ದೇಶದ ಪ್ರಮುಖ 10 ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಹಲವು ಬೇಡಿಕೆಗಳ ಈಡೇರಿಕೆ ಹಿನ್ನೆಲೆಯಲ್ಲಿ 2 ದಿನಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ಮಂಗಳವಾರ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.

 ಬಂದ್ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು   ಜನವರಿ 8 ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಎಲ್ಲಾ ಶಾಲಾ ಹಾಗೂ  ಕಾಲೇಜುಗಳಿಗೆ ದ.ಕ‌. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹಾಗೂ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ರಜೆ ಘೋಷಿಸಿ ಆದೇಶ ಮಾಡಿದ್ದಾರೆ..


Spread the love