2018ರಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

Spread the love

2018ರಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಕಳವು ಹಾಗೂ ಗೋಹತ್ಯೆ ನಿಷೇಧ ಕಾಯ್ದೆ ಸಂಬಂಧಿತ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಜಾರಿಯಾಗಿದ್ದ ಎನ್‌ಬಿಡಬ್ಲ್ಯು (NBW – Non Bailable Warrant) ವಾರಂಟ್‌ಗಳನ್ನು ತಪ್ಪಿಸಿಕೊಂಡು 2018ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಅಬೂಬಕ್ಕರ್ ಸಿದ್ದೀಕ್ @ ಕಾಪ್ರಿ ಸಿದ್ದೀಕ್ (ತಂದೆ: ಅಬ್ದುಲ್ಲಾ), ಪಾವಲಿಕೆ, ಉಪ್ಪಳ, ಕಾಸರಗೋಡು ಜಿಲ್ಲೆ ನಿವಾಸಿ ಎಂದು ಗುರುತಿಸಲಾಗಿದೆ.

ಆರೋಪಿಯ ವಿರುದ್ಧ ಮಂಗಳೂರು ನಗರದ ಉಳ್ಳಾಲ, ಕೊಣಾಜೆ ಹಾಗೂ ಕಂಕನಾಡಿ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು ಮೂರು ಎನ್‌ಬಿಡಬ್ಲ್ಯು ವಾರಂಟ್‌ಗಳು ಬಾಕಿ ಇದ್ದವು.

ಆರೋಪಿಯ ವಿರುದ್ಧ ದಾಖಲಾಗಿದ್ದ ಪ್ರಕರಣಗಳ ವಿವರ ಹೀಗಿವೆ:

ಉಳ್ಳಾಲ ಪೊಲೀಸ್ ಠಾಣೆ ಅಪರಾಧ ಸಂಖ್ಯೆ 74/2017
ಕಲಂ : 380, 411 ಐಪಿಸಿ

ಕೊಣಾಜೆ ಪೊಲೀಸ್ ಠಾಣೆ ಅಪರಾಧ ಸಂಖ್ಯೆ 68/2018
ಕಲಂ : 379, 411 ಐಪಿಸಿ ಹಾಗೂ 4, 5, 7, 8, 9, 11, 12 ಗೋಹತ್ಯೆ ನಿಷೇಧ ಕಾಯ್ದೆ

ಕಂಕನಾಡಿ ಪೊಲೀಸ್ ಠಾಣೆ ಅಪರಾಧ ಸಂಖ್ಯೆ 149/2017
ಕಲಂ : 379, 411 ಐಪಿಸಿ ಹಾಗೂ 4, 5, 7, 8, 9, 11, 12 ಗೋಹತ್ಯೆ ನಿಷೇಧ ಕಾಯ್ದೆ

ಈ ಪ್ರಕರಣಗಳಲ್ಲಿ ಕಳೆದ ಎಂಟು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ಆರೋಪಿ ತಲೆಮರೆಸಿಕೊಂಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ನಗರದಲ್ಲಿ ತಲೆಮರೆಸಿಕೊಂಡಿರುವ ವಾರಂಟ್ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದ್ದು, ಆರೋಪಿಯ ಚಲನವಲನಗಳ ಕುರಿತು ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಿದ ಪಿಎಸ್‌ಐ ಸಿದ್ದಪ್ಪ ಹಾಗೂ ಸಿಬ್ಬಂದಿಗಳ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಬಂಧಿತ ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದ್ದು, ಬಳಿಕ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


Spread the love
Subscribe
Notify of

0 Comments
Inline Feedbacks
View all comments