Home Mangalorean News Kannada News 2025-26ನೇ ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ

2025-26ನೇ ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ

Spread the love

2025-26ನೇ ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ ಪ್ರಸಕ್ತ (2025-26ನೇ) ಶೈಕ್ಷಣಿಕ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ-1ರಲ್ಲಿ 94.10 ಶೇ. ದಾಖಲೆ ಫಲಿತಾಂಶ ದಾಖಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಸಚಿವರು ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಿದರು.

ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದರೆ, ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ ಗಳಿಸಿದೆ. ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನ ಗಳಿಸಿದೆ.

ಜಿಲ್ಲಾವಾರು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ 98.40 ಶೇ. ಫಲಿತಾಂಶ ದಾಖಲಿಸಿದ್ದರೆ, ಉಡುಪಿ ಜಿಲ್ಲೆ 98. ಫಲಿತಾಂಶ ದಾಖಲಿಸುವ ಮೂಲಕ ಮೊದಲ ಎರಡು ಸ್ಥಾನ ಗಳಿಸಿದೆ.. 98.09 ಶೇ. ಫಲಿತಾಂಶ ದಾಖಲಿಸಿದ ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನ ಗಳಿಸಿದೆ.

ವಿದ್ಯಾರ್ಥಿಗಳು ಫಲಿತಾಂಶವನ್ನು karresults.nic.in ನಲ್ಲಿ ಅಥವಾ https://karresults.nic.in KarnatakaOne Mobile App ಮೂಲಕವೂ ಪಡೆಯಬಹುದು. ಅಲ್ಲದೇ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸ್ ಆ್ಯಪ್/ಎಸ್ಸೆಮ್ಮೆಸ್ (SMS) ಮೂಲಕವೂ ಫಲಿತಾಂಶದ ಮಾಹಿತಿ ರವಾನಿಸಲಾಗಿದೆ ಎಂದು ಮಂಡಳಿ ತಿಳಿಸಿದೆ.

ಈ ವರ್ಷ ಪ್ರಥಮ ಬಾರಿ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್ ನಲ್ಲೂ ಅಪ್ಲೋಡ್ ಮಾಡಲಾಗುತ್ತದೆ. ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿಯನ್ನು https://www.digilocker.gov.in ನಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು.


Spread the love

Exit mobile version