
24ನೇ ದೇರೆಬೈಲ್ ವಾರ್ಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲೋಬೊ ಬಿರುಸಿನ ಪ್ರಚಾರ
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್ . ಲೋಬೊರವರು ಇಂದು ತಾ 22.4.2023ರಂದು ನಗರದ 24ನೇ ದೇರೆಬೈಲ್ ವಾರ್ಡಿನಲ್ಲಿ ಬಿರುಸಿನ ಪ್ರಚಾರ ಆರಂಭಿಸಿದರು. ವಾರ್ಡಿನ ವ್ಯಾಪ್ತಿಯಲ್ಲಿ ಬರುವ ಆದರ್ಶ ನಗರ ಮತ್ತು ಶಿವ ನಗರದ ಪರಿಸರದಲ್ಲಿ ಬರುವ ಮನೆಗಳಿಗೆ ತೆರಳಿ ಲೋಬೊ ರವರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ವಿಜ್ಞಾಪಿಸಿದರು.
ಈ ಸಂದರ್ಭದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡುತ್ತಾ ಲೋಬೊ ರವರು,2013ರಿಂದ 2018ರ ಅವಧಿಯಲ್ಲಿ ಶಾಸಕನಾಗಿದ್ದಾಗ ಅನೇಕ ಯೋಜನೆಗಳನ್ನು ತಂದಿದ್ದೇನೆ. ಮಂಗಳೂರನ್ನು ಅಭಿವೃದ್ಧಿಯ ಪಥದಲ್ಲಿ ಕೊಂಡೋಯ್ಯಲು ಜನರ ಸಹಕಾರ ಅತೀ ಅಗತ್ಯ.ಜನರ ಬೆಂಬಲವಿಲ್ಲದೇ ಯಾವುದೇ ಅಭಿವೃದ್ಧಿ ಆಗುವುದಿಲ್ಲ. ಜನರು ಬದಲಾವಣೆಯನ್ನು ನಿರೀಕ್ಷಿಸುತ್ತಿದ್ದಾರೆ. ಖಂಡಿತವಾಗಿ ಒಳ್ಳೆಯ ದಿನಗಳು ಬರಲಿವೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಎಂಎಲ್ ಸಿ ಐವನ್ ಡಿಸೋಜಾ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಬ್ಲಾಕ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್, ಜಿಲ್ಲಾ ಒಬಿಸಿ ಅಧ್ಯಕ್ಷ ವಿಶ್ವಾಸ್ ದಾಸ್, ವಾರ್ಡ್ ಅಧ್ಯಕ್ಷ ರಾಜೇಂದ್ರ ಚಿಲಿಂಬಿ, ಮಾಜಿ ಕಾರ್ಪೊರೇಟರ್ ರಜನೀಶ್, ಮೇಲ್ವಿನ್ ಲೋಬೊ, ಮಿಥುನ್, ಅಶೋಕ್ ಕೋಟ್ಯಾನ್, ಮೈಕಲ್, ಪ್ರವೀಣ್, ಸಂದೇಶ್ ಮೊದಲಾದವರು ಉಪಸ್ಥಿತರಿದ್ದರು.