25 ವರ್ಷಗಳಲ್ಲಿ 31 ಸಾವಿರ ಪ್ರಕರಣಗಳ ಇತ್ಯರ್ಥ: ಪ್ರಮಿಳಾ ನಾಯ್ಡು

Spread the love

25 ವರ್ಷಗಳಲ್ಲಿ 31 ಸಾವಿರ ಪ್ರಕರಣಗಳ ಇತ್ಯರ್ಥ: ಪ್ರಮಿಳಾ ನಾಯ್ಡು

ಬೆಂಗಳೂರು: ಕರ್ನಾಟಕ ರಾಜ್ಯ ಮಹಿಳಾ ಮಹಿಳಾ ಆಯೋಗ ಕಳೆದ 25 ವರ್ಷಗಳಲ್ಲಿ ಸುಮಾರು 31 ಸಾವಿರಕ್ಕೂ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಗೊಳಿಸಿದ್ದು, ಮಹಿಳೆಯರ ಹಿತಾಸಕ್ತಿ ಕಾಪಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿದೆ. ರಜತ ಮಹೋತ್ಸವ ಆಚರಿಸುತ್ತಿರುವ ಹಿನ್ನಲೆಯಲ್ಲಿ ನವೆಂಬರ್ 25 ಮತ್ತು 26 ರಂದು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಪ್ರಮೀಳಾ ನಾಯ್ಡು ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 1997 ರಲ್ಲಿ ಪ್ರಾರಂಭವಾದ ಮಹಿಳಾ ಅಯೋಗ ರಾಜ್ಯದ ಮಹಿಳೆಯರಿಗೆ ರಕ್ಷಣೆ ನೀಡಲು ಮತ್ತು ಸಮಾನತೆ ಹಾಗೂ ಅಭಿವೃದ್ದಿಯ ಉದ್ದೇಶವನ್ನು ಸಹ ಸಾಧಿಸಲು ಅಧಿನಿಯಮಿಸಲಾದ ಕಾನೂನುಗಳನ್ನು ಕಾರ್ಯಗತಗೊಳಿಸುವುದಕ್ಕೆ. ಮಹಿಳೆಯರ ತೊಂದರೆಗಳನ್ನು ನಿವಾರಿಸಲು ಮತ್ತು ಅವರಿಗೆ ಕಲ್ಯಾಣವನ್ನು ಸನಿಶ್ಚಿತಗೊಳಿಸಲು ಮತ್ತು ಪರಿಹಾರವನ್ನು ಒದಗಿಸಲು ಉದ್ದೇಶಿಲಾಗಿರುವ ಕಾರ್ಯನೀತಿಯ ನಿರ್ಧಾರಗಳನ್ನು, ಮಾರ್ಗದರ್ಶಕ ಸೂತ್ರಗಳನ್ನು ಅಥವಾ ಸೂಚನೆಗಳನ್ನು ಪಾಲಿಸದಿರುವುದಕ್ಕೆ, ಮಹಿಳೆಯರ ಬಗ್ಗೆ ಸಂಬಂಧಪಟ್ಟ ದೂರುಗಳನ್ನು ಪರಿಶೀಲಿಸುವಂತಹ ಪ್ರಮುಖ ಕಾರ್ಯಗಳನ್ನು ಆಯೋಗ ಮಾಡುತ್ತಿದೆ.

ಮಹಿಳೆಯರ ಮೇಲೆ ಯಾವುದೇ ರೀತಿಯ ಅನ್ಯಾಯದ ವಿರುದ್ದ ರಕ್ಷಣೆ ಒದಗಿಸುವ ಮಹತ್ವದ ಜವಾಬ್ದಾರಿಯೂ ಆಯೋಗಕ್ಕಿದೆ. ಇಂತಹ ಆಯೋಗ ಕಳೆದ 25 ವರ್ಷಗಳಲ್ಲಿ ರಾಜ್ಯದ ಮಹಿಳೆಯರ ರಕ್ಷಣೆಯಲ್ಲಿ ಪ್ರಮುಖ ಪಾತ್ರವಹಿಸಿದ್ದು, ಕಳೆದ 25 ವರ್ಷಗಳಲ್ಲಿ 31 ಸಾವಿರಕ್ಕೂ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಗೊಳಿಸಿದೆ. ಮಹಿಳೆಯರ ಸರ್ವತೋಮುಖ ಅಭಿವೃದ್ದಿಯ ನಿಟ್ಟಿನಲ್ಲಿಯೂ ಆಯೋಗ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಶ್ವವಿದ್ಯಾಲಯ ಹಾಗೂ ಶಿಕ್ಷಣ ಸಂಸ್ಥೆಗಳು ಮತ್ತು ಕಾಲೇಜು ಶಿಕ್ಷಣ ಸಂಸ್ಥೆಗಳೊಂದಿಗೆ ಕಾನೂನು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಮಹಿಳೆಯರಿಗೆ ಸಂಬಂಧಿಸಿದ ವಿವಿಧ ಕಾನೂನುಗಳ ಬಗ್ಗೆ ಅರಿವನ್ನು ಮೂಡಿಸಲಾಗುತ್ತಿದೆ. ಹೀಗೆ ಹತ್ತ ಹಲವು ಕಾರ್ಯಕ್ರಮಗಳ ಮೂಲಕ ಆಯೋಗ ಸಕ್ರೀಯವಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದೆ ಎಂದು ಹೇಳಿದರು.

ದಿನದ 24 ಗಂಟೆಗಳ ಕಾಲವೂ ಆಯೋಗ ಮಹಿಳೆಯರ ಹಿತರಕ್ಷಣೆಯನ್ನು ಕಾಪಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಹಿಂದಿನ ಎಲ್ಲಾ ಅಧ್ಯಕ್ಷರುಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿದ್ದಾರೆ. ಮಹಿಳೆಯರಲ್ಲಿ ಜಾಗೃತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. 1997 ರಲ್ಲಿ ಆರಂಭವಾದ ಆಯೋಗ ತನ್ನ ರಜತ ಮಹೋತ್ಸವವನ್ನು ಆಯೋಜಿಸುತ್ತಿದೆ. ನವೆಂಬರ್ 25 ಮತ್ತು 26 ರಂದು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ನವೆಂಬರ್ 25 ರಂದು ಬೆಳಿಗ್ಗೆ 10.30 ಕ್ಕೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ನಡೆಸಿಕೊಡಲಿದ್ದು. ಕೇಂದ್ರ ಹಣಕಾಸು ಮತ್ತು ಕಾರ್ಪೋರೇಟ್ ವ್ಯವಹಾರಗಳ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಶೋಭಾ ಕರಂದ್ಲಾಜೆ, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಲ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವರಾದ ಎಂ. ರಾಜೀವ್ ಚಂದ್ರ ಶೇಖರ್ ಅವರು ಉಪಸ್ಥಿತರಿರಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವರಾದ ಹಾಲಪ್ಪ ಆಚಾರ್ ಅವರು ಮಹಿಳಾ ಸಾಧಕರಿಗೆ ಪುರಸ್ಕರಿಸಲಿದ್ದಾರೆ. ದೇಶದ ವಿವಿಧ ರಾಜ್ಯಗಳ ಮಹಿಳಾ ಆಯೋಗದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.


Spread the love

Leave a Reply

Please enter your comment!
Please enter your name here