26ರಂದು ಸ್ಮಾರ್ಟ್ ಸಿಟಿಯ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ

Spread the love

26ರಂದು ಸ್ಮಾರ್ಟ್ ಸಿಟಿಯ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ

ಮಂಗಳೂರು: ಇಲ್ಲಿನ ಸ್ಮಾರ್ಟ್ ಸಿಟಿ ಲಿಮಿಟೆಡ್ ಹಾಗೂ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಮಾ.26ರ ಭಾನುವಾರ ಬೆಳಿಗ್ಗೆ 9 ಗಂಟೆಗೆ ಸ್ಮಾರ್ಟ್ ಸಿಟಿಯ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಸಂಜೆ 5 ಗಂಟೆಗೆ ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗುತ್ತಿದೆ.

ಬೆಳಿಗ್ಗೆ 9 ಗಂಟೆಗೆ ನಗರದ ಮಂಗಳಾ ಕ್ರೀಡಾಂಗಣದ ನೂತನ ಪೆವಿಲಿಯನ್ ಉದ್ಘಾಟನೆ ಹಾಗೂ 10 ಗಂಟೆಗೆ ನಗರದ ಹೊಗೈ ಬಜಾರ್‍ನಲ್ಲಿರುವ ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಅಂದು ಸಂಜೆ 5 ಗಂಟೆಗೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜಲಾಭಿಮುಖ ಪ್ರದೇಶ ಅಭಿವೃದ್ಧಿ ಶಂಕು ಸ್ಥಾಪನೆ, ಸಂಜೆ 5.30ಕ್ಕೆ ಕೇಂದ್ರ ಮಾರುಕಟ್ಟೆ ಶಂಕು ಸ್ಥಾಪನೆ ಹಾಗೂ ಸಂಜೆ 6ಗಂಟೆಗೆ ಸುಲ್ತಾನ ಬತ್ತೇರಿ ಪ್ರದೇಶ ಅಭಿವೃದ್ಧಿ ಯೋಜನೆಯ ಶಂಕುಸ್ಥಾಪನೆ ಹಮ್ಮಿಕೊಳ್ಳಲಾಗಿದೆ.

ಇಂಧನ, ಕನ್ನಡ ಮತ್ತು ಸಂಸ್ಕøತಿ ಸಚಿವ ಹಾಗೂ ಜಿಲ್ಲಾ ಉಸ್ತವಾರಿ ಸಚಿವರಾದ ವಿ. ಸುನೀಲ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸುವರು.

ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಘನ ಉಪಸ್ಥಿತಿ ವಹಿಸುವರು.

ಶಾಸಕರಾದ ಡಿ. ವೇದವ್ಯಾಸ್ ಕಾಮತ್ ಅವರು ಅಧ್ಯಕ್ಷತೆ ವಹಿಸುವರು.

ಮೇಯರ್ ಜಯಾನಂದ ಅಂಚನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಎ.ವಿ. ತೀರ್ಥರಾಮ, ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್, ಕರ್ನಾಟಕ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಉಪಮೇಯರ್ ಪೂರ್ಣಿಮಾ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಚನ್ನಬಸಪ್ಪ, ಬೀದರ್ ನ ಕ.ಪ.ಪ.ಮೀ. ವಿ.ವಿಯ ಕುಲಪತಿ ಡಾ. ಕೆ.ಸಿ. ವೀರಣ್ಣ, ಪಾಲಿಕೆಯ ಸಚೇತಕರಾದ ಪ್ರೇಮಾನಂದ ಶೆಟ್ಟಿ, ಪಟ್ಟಣ ಯೋಜನೆ ಮತ್ತು ಸುಧಾರಣೆ ಸ್ಥಾಯಿ ಸಮಿತಿಯ ಅಧ್ಯಕ್ಷೆ ಶಖಿಲ ಕಾವ, ತೆರಿಗೆ ನಿರ್ಧರಣೆ ಹಣಕಾಸು ಮತ್ತು ಅಪೀಲು ಸ್ಥಾಯಿ ಸಮಿತಿಯ ಅಧ್ಯಕ್ಷ ಕಿಶೋರ್ ಕೊಟ್ಟಾರಿ, ಲೆಕ್ಕಪತ್ರ ಸ್ಥಾಯಿ ಸಮಿತಿಯ ಅಧ್ಯಕ್ಷೆ ನಯನ ಆರ್. ಕೋಟ್ಯಾನ್, ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ ರಘು ಸಾಲಿಯಾನ್, ಬೋಳಾರ ಕಾಪೆರ್Çರೇಟರ್ ಭಾನುಮತಿ ಹೊಗೈ ಬಜಾರ್ ಕಾಪೆರ್Çರೇಟರ್ ರೇವತಿ ಶಾಮ್ ಸುಂದರ್, ಬೋಳೂರು ಕಾಪೆರ್Çರೇಟರ್ ಜಗದೀಶ್ ಶೆಟ್ಟಿ, ಮಣ್ಣಗುಡ್ಡ ವಾರ್ಡ್ ಕಾಪೆರ್Çರೇಟರ್ ಸಂಧ್ಯಾ ಮೋಹನ್ ಆಚಾರ್ಯ ಹಾಗೂ ಮಂಗಳೂರು ಸ್ಮಾರ್ಟ್ ಸಿಟಿ ಮಂಡಳಿ ಸದಸ್ಯರು ಮತ್ತು ಮಂಗಳೂರು ನಗರಮಟ್ಟದ ಸಲಹಾ ಸಮಿತಿ ಸದಸ್ಯರು ಭಾಗವಹಿಸುವರು.


Spread the love