3500 ಕ್ಕೂ ಅಧಿಕ ಪೊಲೀಸ್ ಕಾನ್ಸ್‌ ಟೇಬಲ್‌ ಹುದ್ದೆಗಳಿಗೆ ಅರ್ಜಿ ಅಹ್ವಾನ

Spread the love

3500 ಕ್ಕೂ ಅಧಿಕ ಪೊಲೀಸ್ ಕಾನ್ಸ್‌ ಟೇಬಲ್‌ ಹುದ್ದೆಗಳಿಗೆ ಅರ್ಜಿ ಅಹ್ವಾನ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯು 2020-21ನೇ ಸಾಲಿಗೆ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್ಸೈಟ್ https://recruitment.ksp.gov.in ನಲ್ಲಿ ಆನ್-ಲೈನ್ (Online) (ಎಲೆಕ್ಟ್ರಾನಿಕ್ ಮಾರ್ಗ) ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಅರ್ಹ ಅಭ್ಯರ್ಥಿಗಳು “ಅನುಬಂಧ-ಅ” ರಲ್ಲಿ ನೀಡಲಾಗಿರುವ ಖಾಲಿ ಹುದ್ದೆಗಳ ವರ್ಗೀಕರಣವನ್ನುನೋಡಿ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಸಾಮಾನ್ಯ ಅರ್ಹತೆ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ₹.400/‐

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ₹.200/‐

ನಿಗದಿತ ಶುಲ್ಕವನ್ನು ನಗದು / ಆನ್ಲೈನ್ ರೂಪದಲಿ ್ಲ ಸ್ಥಳೀಯ ಅಂಚೆ ಕಛೇರಿಗಳಲ್ಲಿ ಅಥವಾ ಹೆಚ್.ಡಿ.ಎಫ್.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಿ ನಂತರ ಚಲನನ್ನು ಅಭ್ಯರ್ಥಿ ತನ್ನಲ್ಲಿ ಇಟ್ಟುಕೊಂಡಿರತಕ್ಕದ್ದು

ಅರ್ಜಿದಾರ ಅರ್ಜಿಯನ್ನು ಭರ್ತಿ ಮಾಡುವ ಮುನ್ನ ಅಧಿಕೃತ ವೆಬ್ ಸೈಟ್ ನಲ್ಲಿರುವ ಮಾಹಿತಿಸೂಚಿ/ಸೂಚನೆಗಳನ್ನು ಜಾಗರೂಕತೆಯಿಂದ ಓದಿಕೊಂಡುಭರ್ತಿ ಮಾಡಬೇಕು. ಇಲಾಖೆಯ ಅಧಿಕೃತ ವೆಬ್ ಸೈಟ್ https://recruitment.ksp.gov.in ನಲ್ಲಿ ನೀಡಲಾಗಿರುವ ಸೂಚನೆಗಳನ್ನು ಒದಿಕೊಂಡು ಇರುವ ಅರ್ಜಿಯನ್ನು ಭರ್ತಿ ಮಾಡಬೇಕು

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 25.05.2021 ಬೆಳಿಗ್ಗೆ 10.00 ಗಂಟೆಯಿಂದ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25.06.2021 ಸಂಜೆ 06.00 ಗಂಟೆಯವರೆಗೆ

ಅಧಿಕೃತ ಬ್ಯಾಂಕ್ ಶಾಖೆಗಳ / ಅಂಚೆ ಕಛೇರಿ ವೇಳೆಯಲ್ಲಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 28.06.2021.

ಅರ್ಜಿ ಸಲ್ಲಿಸುವ ಹಾಗೂ ಇತರ ಮಾಹಿತಿಗಳಿಗಾಗಿ ಸಂಪರ್ಕಿಸಿ https://recruitment.ksp.gov.in


Spread the love

3 Comments

Comments are closed.