5 ಕೆಜಿ ಅಕ್ರಮ ಸಾಗಾಟದ ಚಿನ್ನ ವಶ; ಇಬ್ಬರ ಬಂಧನ 

Spread the love

5 ಕೆಜಿ ಅಕ್ರಮ ಸಾಗಾಟದ ಚಿನ್ನ ವಶ; ಇಬ್ಬರ ಬಂಧನ 

ಮಂಗಳೂರು:  ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 2 ಕೋ.ರೂ. ಮೌಲ್ಯದ 5 ಕೆ.ಜಿ. ಚಿನ್ನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು ಸೋಮವಾರ ಪತ್ತೆ ಹಚ್ಚಿ ವಶಪಡಿಸಿಕೊಂಡು, ಕಂಪನಿಯೊಂದರ ನಿರ್ದೇಶಕ ಸಹಿತ ಇಬ್ಬರನ್ನು ಬಂಧಿಸಿದ್ದಾರೆ.

ಉಡುಪಿಯ ಸ್ವರೂಪ್ ಮಿನರಲ್ ರಿಸೋರ್ಸಸ್ ಕಂಪನಿಯ ನಿರ್ದೇಶಕ ಮನೋಹರ್ ಕುಮಾರ್ ಪೂಜಾರಿ ಮತ್ತು ಮಂಗಳೂರಿನ ಅಶೋಕನಗರ ನಿವಾಸಿ ಲೋಹಿತ್ ಶ್ರೀಯಾನ್ ಬಂಧಿತ ಆರೋಪಿಗಳು.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಏರ್ ಕಾರ್ಗೋ ಕಾಂಪ್ಲೆಕ್ಸ್‌ನಲ್ಲಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಮನೋಹರ್ ಕುಮಾರ್‌ನನ್ನು ಬೆಂಗಳೂರಿನಲ್ಲಿ ಬಂಧಿಸಿದರೆ, ಲೋಹಿತ್‌ನನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ. ಬೆಂಗಳೂರು ಮತ್ತು ಮಂಗಳೂರು ಡಿಆರ್‌ಐ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಡಿಆರ್‌ಐ ಉಪ ನಿರ್ದೇಶಕ ಶ್ರೇಯಸ್ ಕೆ.ಎಂ. ತಿಳಿಸಿದ್ದಾರೆ.


Spread the love