5 ಲಕ್ಷ ಹೆಣ್ಣು ಮಕ್ಕಳಿಗೆ ಸ್ವಯಂ ಉದ್ಯೋಗ :ಸಿಎಂ ಬೊಮ್ಮಾಯಿ

Spread the love

5 ಲಕ್ಷ ಹೆಣ್ಣು ಮಕ್ಕಳಿಗೆ ಸ್ವಯಂ ಉದ್ಯೋಗ :ಸಿಎಂ ಬೊಮ್ಮಾಯಿ

ಬೆಂಗಳೂರು: ಸ್ತ್ರೀ ಸಾಮರ್ಥ್ಯ ಯೋಜನೆಯಡಿ ಸುಮಾರು 5 ಲಕ್ಷ ಹೆಣ್ಣು ಮಕ್ಕಳಿಗೆ ಸ್ವಯಂ ಉದ್ಯೋಗ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಶುಕ್ರವಾರ ವಿಧಾನಸೌದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ರಜತ ಮಹೋತ್ಸವ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿ, ಸ್ತ್ರೀ ಸಾಮರ್ಥ್ಯ ಯೋಜನೆಯಡಿ ಪ್ರತಿಯೊಂದು ಗ್ರಾಮದ ಎರಡು ಸಂಘಗಳ ಯೋಜನೆಗಳನ್ನು, ಉತ್ಪಾದನೆಗಳನ್ನು ಗುರುತಿಸಿ, ತರಬೇತಿ ನೀಡಿ, ಮಾರುಕಟ್ಟೆಗೆ ಜೋಡಿಸಿ, 1.50 ಲಕ್ಷ ರೂ.ಗಳನ್ನು ಸರ್ಕಾರದಿಂದ ನೀಡಲಾಗುವುದು ಎಂದರು.

ಮಹಿಳಾ ಆಯೋಗಕ್ಕೆ ಹೆಚ್ಚಿನ ಶಕ್ತಿ ತುಂಬುವ ಪ್ರಯತ್ನ ಮಾಡುವ ಜೊತೆಗೆ ಪರಿಣಾಮಕಾರಿ ಕೆಲಸ ಮಾಡಲು ಬೇಕಾಗುವ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಮಹಿಳಾ ಆಯೋಗದಿಂದ ದೂರುಗಳು ಬಂದರೆ 7 ರಿಂದ 8 ಗಂಟೆಯೊಳಗೆ ರಿಜಿಸ್ಟ್ರಾರ್ ಮಾಡಿ ತನಿಖೆ ನಡೆಸುವಂತೆ ಉನ್ನತ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ನಿರ್ಭಯ ಯೋಜನೆ ಕುರಿತು ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಲಾಗುತ್ತಿದ್ದು, ಈ ಯೋಜನೆಯಡಿ 7,500 ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಮಹಿಳೆಯರಿಗಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದ್ದು, ತಾಯಿ ಮತ್ತು ಮಗುವಿಗೆ ಪೌಷ್ಠಿಕ ಆಹಾರ ಒದಗಿಸಲಾಗುತ್ತಿದೆ. ಗರ್ಭಿಣಿ ಸ್ತ್ರೀಯರಿಗೆ ಐರನ್ ಮಾತ್ರೆ ನೀಡಲಾಗುತ್ತಿದೆ. ಗರ್ಭಿಣಿ ಮಹಿಳೆಯರು ಕೆಲಸ ನಿರ್ವಹಿಸುವ ಕಡೆ ವಿಶೇಷ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಕೆಲಸ ನಿರ್ವಹಿಸುವ ಮಹಿಳೆಯರಿಗಾಗಿ 5 ಪ್ರಮುಖ ನಗರಗಳಲ್ಲಿ ಮಹಿಳಾ ಹಾಸ್ಟೆಲ್‍ಗಳನ್ನು ನಿರ್ಮಿಸಲಾಗಿದ್ದು, ಉನ್ನತ ವ್ಯಾಸಂಗ ಮಾಡುವ ಮಹಿಳೆಯರಿಗೆ ತರಬೇತಿ ನೀಡಲಾಗುತ್ತಿದೆ ಎಂದರು.

ಅಂಗನವಾಡಿ, ಆಶಾ ಕಾರ್ಯಕರ್ತರಿಗೆ , ಅಡಿಗೆ ಮಾಡುವವರಿಗೆ ವೇತನ ಹೆಚ್ಚಿಸಿದ್ದು, ಎನ್‍ಪಿಎಸ್ ಯೋಜನೆಯನ್ನು ಮರು ಜಾರಿ ಮಾಡಲಾಗಿದೆ. ಒಂದೇ ವರ್ಷದಲ್ಲಿ 4 ಸಾವಿರ ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಲಾಗುತ್ತಿದೆ. ತಳಹಂತದಿಂದ ಹಿಡಿದು ಮೇಲಿನ ಹಂತದವರೆಗಿನ ಮಹಿಳೆಯರಿಗೆ ಎಲ್ಲಾ ರೀತಿಯ ಪ್ರೋತ್ಸಾಹ ನೀಡಲಾಗುತ್ತಿದೆ. ಮಹಿಳೆಯರು ಸಬಲರಾದರೆ ದೇಶ ಸಬಲವಾದಂತೆ. ಸರ್ಕಾರದಿಂದ ಎಷ್ಟು ಮಾಡಲು ಸಾಧ್ಯವೊ ಅಷ್ಟನ್ನು ಮಾಡಿ, ದೇಶ ಕಟ್ಟಲು ತಾಯಂದಿರನ್ನು ಸಶಸ್ತ್ರರನ್ನಾಗಿ ಮಾಡಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಮಹಿಳೆಯರ ರಕ್ಷಣೆಗಾಗಿ, ಗೌರವಕ್ಕಾಗಿ ಕೆಲಸ ಮಾಡುತ್ತಿರುವ ರಾಜ್ಯ ಮಹಿಳಾ ಆಯೋಗವು 25 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವ ಆಚರಿಸುತ್ತಿರುವುದಕ್ಕೆ ಶುಭಾಶಯ ಕೋರಿದರು.


Spread the love

Leave a Reply

Please enter your comment!
Please enter your name here