8 ರಾಜ್ಯದಲ್ಲಿ ಉಗ್ರರ ದಾಳಿ ಸಾಧ್ಯತೆ : ನೀಲಮಣಿ ರಾಜು ತುರ್ತು ಪತ್ರ

Spread the love

8 ರಾಜ್ಯದಲ್ಲಿ ಉಗ್ರರ ದಾಳಿ ಸಾಧ್ಯತೆ : ನೀಲಮಣಿ ರಾಜು ತುರ್ತು ಪತ್ರ

ಬೆಂಗಳೂರು: ದಕ್ಷಿಣ ಭಾರತದ 8 ರಾಜ್ಯಗಳ ಪ್ರಮುಖ ನಗರಗಳಲ್ಲಿ ಭಯೋತ್ಪಾದಕ ದಾಳಿ ನಡೆಯಬಹುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್.ರಾಜು ಅಕ್ಕ-ಪಕ್ಕದ ರಾಜ್ಯಗಳ ಪೊಲೀಸ್ ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ.

ಶುಕ್ರವಾರ ಬೆಂಗಳೂರಿನ ಪೊಲೀಸ್ ಕಂಟ್ರೋಲ್‌ ರೂಂಗೆ ಬಂದ ಫೋನ್ ಕರೆ ಆಧರಿಸಿ ಈ ಪತ್ರವನ್ನು ನೀಲಮಣಿ ಎನ್.ರಾಜು ಬರೆದಿದ್ದಾರೆ. ತಮಿಳು ಮತ್ತು ಹಿಂದಿ ಭಾಷೆಯಲ್ಲಿ ಮಾತನಾಡುತ್ತಿದ್ದ ವ್ಯಕ್ತಿ ಉಗ್ರರ ದಾಳಿಯ ನಡೆಯಬಹುದು ಎಂದು ಮಾಹಿತಿ ನೀಡಿದ್ದಾನೆ.

ತಮಿಳುನಾಡು, ಕೇರಳ, ಆಂಧ್ರ ಪ್ರದೇಶ, ತೆಲಂಗಾಣ, ಪುದುಚೇರಿ, ಗೋವಾ, ಮಹಾರಾಷ್ಟ್ರ ಮತ್ತು ಕರ್ನಾಟಕದ ಪ್ರಮುಖ ನಗರಗಳಲ್ಲಿ ಉಗ್ರರು ದಾಳಿ ನಡೆಸಬಹುದು ಎಂದು ಪತ್ರದಲ್ಲಿ ವಿವರಣೆ ನೀಡಲಾಗಿದೆ.

ಸ್ವಾಮಿ ಸುಂದರ್ ಮೂರ್ತಿ ಎನ್ನುವ ಹೆಸರಿನ ಲಾರಿ ಡ್ರೈವರ್ ಬೆಂಗಳೂರಿನ ಪೊಲೀಸ್ ಕಂಟ್ರೋಲ್ ರೂಂಗೆ ಶುಕ್ರವಾರ ರಾತ್ರಿ ಕರೆ ಮಾಡಿದ್ದ. ತಮಿಳುನಾಡಿಗೆ ಹೋಗುತ್ತಿದ್ದ ಆತ ಹಿಂದಿ ಮತ್ತು ತಮಿಳಿನಲ್ಲಿ ಮಾತನಾಡುತ್ತಿದ್ದ.

ಆಂಧ್ರಪ್ರದೇಶ, ತೆಲಂಗಾಣ, ಪುದುಚೇರಿ, ಗೋವಾ, ಮಹಾರಾಷ್ಟ್ರ ಮತ್ತು ತಮಿಳುನಾಡಿನ ಪ್ರಮುಖ ನಗರಗಳಲ್ಲಿ ಉಗ್ರರ ದಾಳಿ ನಡೆಯಬಹುದು. ರೈಲಿನಲ್ಲಿ ಸ್ಪೋಟ ಸಂಭವಿಸಬಹುದು. 19 ಉಗ್ರರು ತಮಿಳುನಾಡಿನ ರಾಮನಾಥಪುರಂಗೆ ಬಂದಿದ್ದಾರೆ ಎಂದು ಮಾಹಿತಿ ನೀಡಿದ್ದಾನೆ. ತಮ್ಮ ರಾಜ್ಯಗಳಲ್ಲಿ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು. ಇದು ಅತ್ಯಂತ ತುರ್ತು ವಿಷಯವಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

 


Spread the love