8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್ಪಿಸಿ ವಾರಂಟ್ ಆರೋಪಿಯ ಬಂಧನ
ಮಂಗಳೂರು: ಸುಮಾರು 8 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್ಪಿಸಿ (LPC) ವಾರಂಟ್ ಆರೋಪಿಯನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮುವಾಚ್ (45), ಮೊಹಮ್ಮದ್ ಬಾವಾ ಉಸ್ತಾದ್ ಅವರ ಪುತ್ರ, ಹಿಲೇರಿ ನಗರ, ಮುಕ್ಕಚೇರಿ, ಉಳ್ಳಾಲ, ಮಂಗಳೂರು; ಪ್ರಸ್ತುತ ಇರಿಕ್ಕೂರು ಪೆರುವಳತ್ ಪರಂಬು, ಕೇರಳ ರಾಜ್ಯ ಎಂದು ಗುರುತಿಸಲಾಗಿದೆ.
ಆರೋಪಿಯ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಮೊ.ನಂ. 166/2006, ಕಲಂ 379 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಆರೋಪಿಯು ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯವು ಆತನ ವಿರುದ್ಧ ಎಲ್ಪಿಸಿ ವಾರಂಟ್ ಹೊರಡಿಸಿತ್ತು.
ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ, ಆ.28, 2026ರಂದು ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ.
ನಂತರ ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.













