ಬೆಳ್ತಂಗಡಿ: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬೆಳ್ತಂಗಡಿ: ಸುಮಾರು ಒಂಬತ್ತು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಆಂಧ್ರಪ್ರದೇಶದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 169/2016ರಡಿ ಐಪಿಸಿ ಕಲಂ 379 ಹಾಗೂ 201ರ ಪ್ರಕರಣದಲ್ಲಿ ಆರೋಪಿಯಾಗಿರುವ ಆಂಧ್ರಪ್ರದೇಶದ ಚಿತ್ತೂರು ನಿವಾಸಿ ಶ್ರೀನಿವಾಸಲು ವಿ. ಕಳೆದ ಸುಮಾರು ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡು ವಿಚಾರಣೆಗೆ ಹಾಜರಾಗುತ್ತಿರಲಿಲ್ಲ.
ಧರ್ಮಸ್ಥಳ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ವೃಷಭ ಹಾಗೂ ಚರಣ್ ರಾಜ್ ಅವರು ಜೂನ್ 30ರಂದು ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಜುಲೈ 1ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
