9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ
ಬಂಟ್ವಾಳ: ಪ್ರಕರಣವೊಂದರಲ್ಲಿ ವಿಚಾರಣೆಗೆ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪುಂಜಾಲಕಟ್ಟೆ ಠಾಣೆ ಪೊಲೀಸರು ಚಿಕ್ಕಮಗಳೂರಿನಲ್ಲಿ ಬಂಧಿಸಿದ್ದಾರೆ.
ಪುಂಜಾಲಕಟ್ಟೆ ಪೊಲೀಸ್ ಠಾಣೆ ಅ.ಕ್ರ. 156/2016ರಲ್ಲಿ ಭಾರತೀಯ ದಂಡ ಸಂಹಿತೆ (IPC) ಕಲಂ 379 ಹಾಗೂ 42, 42, 44 MMRD Act ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಆರೋಪಿಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಿವಾಸಿ ಶಬೀರ್ ಎಂಬಾತನು ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದನು.
ಆರೋಪಿಯ ಇರುವಿಕೆಯ ಬಗ್ಗೆ ಮಾಹಿತಿ ಪಡೆದ ಪುಂಜಾಲಕಟ್ಟೆ ಠಾಣೆಯ ಹೆಚ್‌ಸಿ 1023 ರಾಜೇಶ್, ಸಿಪಿಸಿ 2276 ಚೋಳಪ್ಪ ಸಂಶಿ ಹಾಗೂ ಸಿಪಿಸಿ 2524 ನಾಗರಾಜ್ ಅವರು ಚಿಕ್ಕಮಗಳೂರಿನಲ್ಲಿ ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ.
ಬಂಧಿತ ಆರೋಪಿಯನ್ನು ಆಗಸ್ಟ್ 22, 2026ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.













