ಕುತ್ತಿಗೆಗೆ ಹಗ್ಗ ಸಿಲುಕಿ 9 ವರ್ಷದ ಬಾಲಕ ಮೃತ್ಯು; ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Spread the love

ಕುತ್ತಿಗೆಗೆ ಹಗ್ಗ ಸಿಲುಕಿ 9 ವರ್ಷದ ಬಾಲಕ ಮೃತ್ಯು; ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬಂಟ್ವಾಳ : ಆಕಸ್ಮಿಕವಾಗಿ ಕುತ್ತಿಗೆಗೆ ಹಗ್ಗ ಸಿಲುಕಿ ಉಸಿರುಗಟ್ಟಿ 9 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಕುಕ್ಕಿಪಾಡಿ ಗ್ರಾಮದ ಮಾವಿನಕಟ್ಟೆ ಸಮೀಪದಲ್ಲಿ ಅ.25ರಂದು ರಾತ್ರಿ ನಡೆದಿದೆ.

ಆನಂದ ಪೂಜಾರಿ ಅವರ ಪುತ್ರ ಅಮೃತ್ ಎ. ಪೂಜಾರಿ (9) ಮೃತಪಟ್ಟ ಬಾಲಕ.

ಅ.25 ರಂದು ರಾತ್ರಿ ಅಮೃತ್ ಮನೆಯ ಎದುರಿನ ಹಾಲ್‌ನಲ್ಲಿ ಒಬ್ಬನೇ ಆಟವಾಡುತ್ತಿದ್ದ ಎನ್ನಲಾಗಿದೆ. ಈ ವೇಳೆ ಮನೆಯ ಕಿಟಿಕಿಯಲ್ಲಿ ಈ ಮೊದಲೇ ಸಿಕ್ಕಿಸಲಾಗಿದ್ದ ಹಗ್ಗವು ಆಕಸ್ಮಿಕವಾಗಿ ಆತನ ಕುತ್ತಿಗೆಗೆ ಸಿಲುಕಿಕೊಂಡಿದೆ. ಇದರಿಂದ ಉಸಿರುಗಟ್ಟಿ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಕೂಡಲೇ ಬಾಲಕನನ್ನು ಉಪಚರಿಸಿದರೂ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗದ ಹಿನ್ನೆಲೆಯಲ್ಲಿ ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿನ ವೈದ್ಯರು ಪರೀಕ್ಷಿಸಿ ಬಾಲಕ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಕುರಿತು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ 27/2026ರಂತೆ ಬಿಎನ್‌ಎಸ್‌ಎಸ್ ಕಲಂ 194ರಡಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.


Spread the love
Subscribe
Notify of

0 Comments