ತಂಬಾಕು ಸೇವನೆಯಿಂದ ದುಷ್ಪರಿಣಾಮ- ಡಾ.ಚಂದ್ರಶೇಖರ್ ಅಡಿಗ

Spread the love

ತಂಬಾಕು ಸೇವನೆಯಿಂದ ದುಷ್ಪರಿಣಾಮ- ಡಾ.ಚಂದ್ರಶೇಖರ್ ಅಡಿಗ

ಉಡುಪಿ: ತಂಬಾಕಿನಲ್ಲಿ 300ಕ್ಕೂ ಹೆಚ್ಚು ವಿಷಕಾರಿ ಅಂಶಗಳಿದ್ದು, ತಂಬಾಕು ಸೇವನೆಯ ಪರಿಣಾಮ ನೇರವಾಗಿ ದೇಹದ ಪ್ರತಿಯೊಂದು ಪ್ರಮುಖ ಅಂಗದ ಮೇಲೆ ಪರಿಣಾಮವನ್ನು ಬೀರುತ್ತದೆ ಎಂದು ಉಡುಪಿ ಜಿಲ್ಲಾ ಅಸ್ಪತ್ರೆ ವೈದ್ಯಾಧಿಕಾರಿ ಡಾ. ಚಂದ್ರಶೇಖರ್ ಅಡಿಗ ತಿಳಿಸಿದ್ದಾರೆ.

ಅವರು ಶುಕ್ರವಾರ, ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ಉಡುಪಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ ಜಿಲ್ಲೆ, ಜಿಲ್ಲಾ ಅಸ್ಪತ್ರೆ ಅಜ್ಜರಕಾಡು ಉಡುಪಿ, ಎನ್.ಟಿ.ಸಿ.ಪಿ ಮತ್ತು ಎನ್.ಪಿ.ಸಿ.ಡಿ.ಸಿ.ಎಸ್ ವಿಭಾಗ ಜಿಲ್ಲಾ ಅಸ್ಪತ್ರೆ ಉಡುಪಿ, ದಂತ ವೈದ್ಯಕೀಯ ವಿಭಾಗ ಜಿಲ್ಲಾ ಅಸ್ಪತ್ರೆ ಉಡುಪಿ, ಭಾರತೀಯ ವೈದ್ಯಕೀಯ ಮಂಡಳಿ ಕರಾವಳಿ ಉಡುಪಿ ಜಿಲ್ಲೆ, ಭಾರತೀಯ ದಂತ ವೈದ್ಯಕೀಯ ಮಂಡಳಿ ಉಡುಪಿ, ರೋಟರಿ ಕ್ಲಬ್ ಅಂಬಲಪಾಡಿ ಉಡುಪಿ, ಇವರ ಸಹಯೋಗದೊಂದಿಗೆ ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ವಿಶ್ವ ತಂಬಾಕು ರಹಿತ ದಿನಾಚರಣೆ ಮತ್ತು ತಂಬಾಕು ಜಾಗೃತಿ ಜಾಥ ಮತ್ತು ಮಾಹಿತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಾಯಿ ಕ್ಯಾನ್ಸರ್ ಅನ್ನು ಮೊದಲ ಹಂತದಲ್ಲಿ ಪತ್ತೆ ಹಚ್ಚಿದಲ್ಲಿ ಶೇ.90 ಗುಣಪಡಿಸಬಹುದು. ನಾಲ್ಕನೇ ಹಂತದಲ್ಲಿ ಕ್ಯಾನ್ಸರ್ ಪತ್ತೆ ಹಚ್ಚಿದಲ್ಲಿ ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಾಗುವುದಿಲ್ಲ. ಬಾಯಿ ಕ್ಯಾನ್ಸರ್ಗೆ ಸರ್ಜರಿ, ರೇಡಿಯೇಶನ್, ಕಿಮೋಥೇರಪಿ ಚಿಕಿತ್ಸೆಗಳಿದ್ದು, ಸರ್ಜರಿ ಮೂಲಕ ಸಂಪೂರ್ಣವಾಗಿ ಗುಣಪಡಿಸಬಹುದು ಎಂದರು.

ಸರಕಾರವು ತಂಬಾಕು ನಿಷೇಧಕ್ಕೆ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಮತ್ತು ಧೂಮಪಾನ ನಿಷೇಧಕ್ಕೆ ಹಾಗೂ ತಂಬಾಕು ಉತ್ಪನ್ನಗಳ ಮೇಲೆ ತೆರಿಗೆ ಹೆಚ್ಚಳ, ತಂಬಾಕು ಸೇವನೆ ಪ್ರಚೋದಿಸುವ ಜಾಹೀರಾತು ನಿಷೇಧಕ್ಕೆ ಬಹಳಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಪ್ರತಿ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಒಂದೊಂದು ಘೋಷ ವಾಕ್ಯದೊಂದಿಗೆ ತಂಬಾಕು ರಹಿತ ದಿನಾಚರಣೆಯನ್ನು ಆಚರಿಸುತ್ತದೆ. ಈ ವರ್ಷ ಶ್ವಾಸಕೋಶದ ಆರೋಗ್ಯಕ್ಕೆ ಮಹತ್ವವನ್ನು ನೀಡಲಾಗಿದೆ ಎಂದು ಹೇಳಿದರು.

ತಂಬಾಕು ಸೇವನೆ ಬಹುದೊಡ್ಡ ಸಮಸ್ಯೆಯಾಗಿದ್ದು, ಇದಕ್ಕೆ ಹೆಚ್ಚಾಗಿ ಬಲಿಯಾಗುತ್ತಿರುವವರು 15ಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಇದು ಬಹಳ ಅಪಾಯಕಾರಿ. ಮೋಜು, ಮಸ್ತಿಗಾಗಿ ಪ್ರಾರಂಭವಾಗಿ ಅದೊಂದು ಚಟವಾಗಿ ಪರಿವರ್ತನೆಯಾಗುತ್ತದೆ. ತಂಬಾಕು ಸೇವನೆಗೆ ಇತ್ತೀಚಿಗೆ ಯುವಜನತೆ ಹೆಚ್ಚಾಗಿ ಬಲಿಯಾಗುತ್ತಿದ್ದು ತಂಬಾಕು ಸುಲಭವಾಗಿ ಸಿಗದಂತೆ ಮಾಡಬೇಕು ಎಂದರು.

ಮುಖ್ಯ ಅತಿಥಿಯಾಗಿದ್ದ, ಅಂಬಲಪಾಡಿ ರೋಟರಿ ಕ್ಲಬ್ ಅಧ್ಯಕ್ಷ ರೋ ಖಲೀಲ್ ಅಹ್ಮದ್ ಮಾತನಾಡಿ, ತಂಬಾಕು ರಹಿತ ದಿನಾಚರಣೆಯು ಒಂದು ದಿನಕ್ಕೆ ಮಾತ್ರ ಸೀಮಿತವಾಗಿರದೇ ಪ್ರತಿ ನಿತ್ಯಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ತಂಬಾಕು ಸೇವನೆ ಮಾಡುವುದು ಕಂಡುಬಂದಲ್ಲಿ ತಂಬಾಕು ಸೇವನೆ ಮಾಡಿದವರಿಗೆ ಮಾತ್ರವಲ್ಲದೆ ಅವರ ಸಮೀಪವಿರುವರಿಗೂ ಕಾಯಿಲೆ ಬರುವ ಸಾಧ್ಯತೆ ಇರುವುದರಿಂದ ನಮಗೆ ಯಾಕೆ ಎಂದು ಸುಮ್ಮನಿರದೆ ಖಂಡಿಸಬೇಕು ಎಂದು ಹೇಳಿದರು.

ಭಾರತೀಯ ದಂತ ವೈದ್ಯಕೀಯ ಸಂಘ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಮನೋಜ್ ಮ್ಯಾಕ್ಸಿಮ್ ಡಿ. ಲೀಮಾ ಮಾತನಾಡಿ, ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಬಾಯಿಯ ಕ್ಯಾನ್ಸರ್ ಕುರಿತು ಅರಿವು ಮೂಡಿಸಬೇಕು. ಕ್ಯಾನ್ಸರ್ ಅನ್ನು ಪ್ರಾಥಮಿಕ ಹಂತದಲ್ಲಿ ಪತ್ತೆ ಹಚ್ಚಿದಲ್ಲಿ ಸಂಪೂರ್ಣವಾಗಿ ಗುಣ ಪಡಿಸಬಹುದು. ಇಂತಹ ಕಾರ್ಯಕ್ರಮ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಿರದೇ ಪ್ರತಿನಿತ್ಯ ಅರಿವು ಮೂಡಿಸುವ ಕಾರ್ಯವಾಗಬೇಕು ಎಂದು ಹೇಳಿದರು.

ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್ಸ್ ಮಣಿಪಾಲ್ನ ಸಹಾಯಕ ಪ್ರೋಫೆಸರ್ ಹಾಗೂ ಓರಲ್ ಕ್ಯಾನ್ಸರ್ ಸ್ಪೆಷಲಿಷ್ಟ್, ಡಾ. ಆದರ್ಶ ಕುಡ್ವ ತಂಬಾಕಿನ ದುಷ್ಪರಿಣಾಮ ಮತ್ತು ಓರಲ್ ಕ್ಯಾನ್ಸರ್ ಕುರಿತು ಉಪನ್ಯಾಸ ಮಾಡಿದರು.

ಕಾರ್ಯಕ್ರಮದಲ್ಲಿ ತಂಬಾಕಿನಿಂದ ಆಗುವ ದುಷ್ಪರಿಣಾಮದ ಕುರಿತು ಕಿರು ಬೀದಿ ನಾಟಕ ನಡೆಯಿತು.

ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಉಡುಪಿ ಬೋರ್ಡ್ ಹೈಸ್ಕೂಲ್ನಿಂದ ಜಿಲ್ಲಾಸ್ಪತ್ರೆಯವರೆಗೆ ತಂಬಾಕು ಮತ್ತು ಶ್ವಾಸಕೋಶದ ಖಾಯಿಲೆಗಳು ಎಂಬ ಘೋಷವಾಕ್ಯದೊಂದಿಗೆ ನಡೆದ ಜಾಥಕ್ಕೆ ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಪ್ರಶಾಂತ್ ಭಟ್ ಚಾಲನೆ ನೀಡಿದರು.

ಉಡುಪಿ ತಾಲೂಕು ಆರೋಗ್ಯಾಧಿಕಾರಿ(ಪ್ರಭಾರ) ಡಾ.ಸುರೇಶ್ ನಾಯಕ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಭಾರತೀಯ ವೈದ್ಯಕೀಯ ಮಂಡಳಿ ಸದಸ್ಯ ಶಶಿಕುಮಾರ್ ಉಪಸ್ಥಿತರಿದ್ದರು. ಆಪ್ತ ಸಮಾಲೋಚಕಿ ಕೃತಿ ಸ್ವಾಗತಿಸಿದರು. ಮನು ಕಾರ್ಯಕ್ರಮ ನಿರೂಪಿಸಿ ವಂದನಾರ್ಪಣೆ ಮಾಡಿದರು.


Spread the love

1 Comment

  1. The conflict between the various governments and every health organisations around the world about Tobacco is sadly well known. Any one who has seen the British TV comedy series ‘The Smoke Screen’ would know what I am talking about here. The governments are addicted to the revenue, the tobacco industry adds to the state treasury year after year. This conflict is not going to be resolved any time soon. The lives of millions of people are on those who advertise, encourage and promote smoking. As many western nations have slowly come to realise the harm smoking does to its citizens, the tobacco industry is now targeting the masses of developing countries, mostly in the East. Like any successful campaign this problem can only be solved at the grass-root level. Each individual smoker should realise, he is not only damaging his health but his loved ones’ too due to passive smoking, this habit must end

Comments are closed.