ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ಮಾನವ ಬುರುಡೆ ಪತ್ತೆ

Spread the love

ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ಮಾನವ ಬುರುಡೆ ಪತ್ತೆ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಸಮೀಪ ರಾಜ್ಯ ಹೆದ್ದಾರಿ ಬದಿಯಲ್ಲಿ ಮಾನವ ದೇಹದ ಬುರುಡೆಯೊಂದು ಪತ್ತೆಯಾಗಿರುವ ಘಟನೆ ನವೆಂಬರ್ 12ರಂದು ಬೆಳಕಿಗೆ ಬಂದಿದೆ.

ಬಂಟ್ವಾಳ ಮೂಲದ ವ್ಯಕ್ತಿಯೊಬ್ಬರು ನವೆಂಬರ್ 12ರಂದು ಸಂಜೆ ತಮ್ಮ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಈ ವೇಳೆ ರಾಜ್ಯ ಹೆದ್ದಾರಿ ಪಕ್ಕದ ವಿದ್ಯುತ್ ಕಂಬಗಳಿಗೆ ಅಡ್ಡಲಾಗಿದ್ದ ಮರದ ರೆಂಬೆಗಳನ್ನು ಕತ್ತರಿಸುತ್ತಿದ್ದಾಗ ಮಾನವ ಬುರುಡೆಯೊಂದು ಅವರ ಗಮನಕ್ಕೆ ಬಂದಿದೆ.

ಈ ಕುರಿತು ಅವರು ಅದೇ ದಿನ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ಅರ್ಜಿ ಸಲ್ಲಿಸಿದ್ದಾರೆ. ದೂರನ್ನು 422/2026ನೇ ಸಂಖ್ಯೆಯಲ್ಲಿ ಸ್ವೀಕರಿಸಿರುವ ಪೊಲೀಸರು ವಿಚಾರಣೆ ಆರಂಭಿಸಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.


Spread the love
Subscribe
Notify of

0 Comments