Home Mangalorean News Kannada News ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ : ಚಾಲಕ ಪಾರು

ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ : ಚಾಲಕ ಪಾರು

Spread the love

ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ : ಚಾಲಕ ಪಾರು

ಉಳ್ಳಾಲ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟೆಕಾರು ಅಡ್ಕ ಬಳಿ ಗುರುವಾರ ಮಧ್ಯಾಹ್ನ ಸಂಭವಿಸಿದೆ. ಹಿಂಬದಿ ವಾಹನ ಸವಾರರೊಬ್ಬರು ಅಪಾಯದ ಮುನ್ಸೂಚನೆ ನೀಡಿದ ಪರಿಣಾಮ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತಲಪಾಡಿ ನಿವಾಸಿ ರಿಯಾಝ್ ಎಂಬವರು ಗುರುವಾರ ಮಧ್ಯಾಹ್ನ ಅಡ್ಕದ ಗ್ಯಾರೇಜ್ ಒಂದರಲ್ಲಿ ದುರಸ್ತಿ ಮಾಡಿಸಿಕೊಂಡಿದ್ದ ತಮ್ಮ ಓಮ್ನಿ ಕಾರನ್ನು ವಾಪಸು ಪಡೆದು ಪೆಟ್ರೋಲ್ ತುಂಬಿಸಿ ತಲಪಾಡಿ ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದ್ದರೂ ಚಾಲಕರ ಗಮನಕ್ಕೆ ಅದು ಬಂದಿರಲಿಲ್ಲ.

ಹಿಂಬದಿ ಬರುತ್ತಿದ್ದ ವಾಹನ ಸವಾರರೊಬ್ಬರು ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿರುವುದನ್ನು ಗಮನಿಸಿ ತಕ್ಷಣ ರಿಯಾಝ್ ಅವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಚಾಲಕರು ತಕ್ಷಣ ವಾಹನ ನಿಲ್ಲಿಸಿ ಕೆಳಗಿಳಿದಿದ್ದು, ದೊಡ್ಡ ಅನಾಹುತ ತಪ್ಪಿದಂತಾಗಿದೆ.


Spread the love

Exit mobile version