Home Mangalorean News Kannada News ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರ ಕಾರು ಸಹಿತ ಮೂರು ಕಾರುಗಳ ಮಧ್ಯೆ ಸರಣಿ ಅಪಘಾತ

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರ ಕಾರು ಸಹಿತ ಮೂರು ಕಾರುಗಳ ಮಧ್ಯೆ ಸರಣಿ ಅಪಘಾತ

Spread the love

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರ ಕಾರು ಸಹಿತ ಮೂರು ಕಾರುಗಳ ಮಧ್ಯೆ ಸರಣಿ ಅಪಘಾತ

ಉಡುಪಿ: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಫೂರ್ ಪ್ರಯಾಣಿಸುತ್ತಿದ್ದ ಕಾರು ಸಹಿತ ಮೂರು ಕಾರುಗಳ ಮಧ್ಯೆ ಪಾಂಗಾಳ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಸಂಜೆ ಅಪಘಾತ ಸಂಭವಿಸಿರುವ ಬಗ್ಗೆ ವರದಿಯಾಗಿದೆ.

ಮಾಹಿತಿಗಳ ಪ್ರಕಾರ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಾರು ಹಾಗೂ ಇತರ ಎರಡು ಕಾರುಗಳ ಮಧ್ಯೆ ಅಪಘಾತ ಸಂಭವಿಸಿದ್ದು, ಇದರಿಂದ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಫೂರ್ ಸಣ್ಣಪುಟ್ಟ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಇತರ ಕಾರಿನಲ್ಲಿದ್ದ ಯಾರಿಗೂ ಗಾಯಗಳಾಗಿಲ್ಲ ಎಂದು ಮೂಲಗಳು ತಿಳಿಸಿವೆ.


Spread the love

Exit mobile version