ಮೇರಿ ಹಿಲ್ ಹೊಟೇಲ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕ ನಾಪತ್ತೆ

Spread the love

ಮೇರಿ ಹಿಲ್ ಹೊಟೇಲ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕ ನಾಪತ್ತೆ

ಮಂಗಳೂರು: ಕೊಳಂಬೆ ಗ್ರಾಮದ ಕಿನ್ನಿಕಂಬಳ ನಿವಾಸಿ ಪೀಟರ್ ಅರುಣ್ ಡಿಸೋಜಾ (43) ರವರು ಅವಿವಾಹಿತರಾಗಿದ್ದು, ಮೇರಿಹಿಲ್ ಹೊಟೇಲ್ನಲ್ಲಿ ಕೆಲಸ ಮಾಡಿಕೊಂಡಿದ್ದರು. ಮೇ 7 ರಂದು ಕಾಣೆಯಾಗಿದ್ದು ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಣೆಯಾದವರ ಚಹರೆ: ಎತ್ತರ 5.6 ಅಡಿ ಗೋಧಿ ಮೈಬಣ್ಣ, ಕಪ್ಪು ಕೂದಲು, ಸಾಧಾರಣ ಶರೀರ ಹೊಂದಿರುತ್ತಾರೆ. ಕನ್ನಡ, ಹಿಂದಿ, ಇಂಗ್ಲೀಷ್, ತುಳು, ಕೊಂಕಣಿ ಭಾಷೆ ಮಾತನಾಡುತ್ತಾರೆ.

ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಮಂಗಳೂರು ಗ್ರಾಮಾಂತರ ಪೋಲಿಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments