Home Mangalorean News Kannada News ದೈವದ ಭಂಡಾರ ಮೆರವಣಿಗೆ ವೇಳೆ ಕಾಲುಸಂಕ ಮುರಿದು ಅವಘಡ; 8 ಮಂದಿಗೆ ಗಾಯ

ದೈವದ ಭಂಡಾರ ಮೆರವಣಿಗೆ ವೇಳೆ ಕಾಲುಸಂಕ ಮುರಿದು ಅವಘಡ; 8 ಮಂದಿಗೆ ಗಾಯ

Spread the love

ದೈವದ ಭಂಡಾರ ಮೆರವಣಿಗೆ ವೇಳೆ ಕಾಲುಸಂಕ ಮುರಿದು ಅವಘಡ; 8 ಮಂದಿಗೆ ಗಾಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಪುಚ್ಚೆಮೊಗರು ಬಾವದಬೈಲು ಪ್ರದೇಶದಲ್ಲಿ ದೈವದ ಭಂಡಾರ ಮೆರವಣಿಗೆ ವೇಳೆ ಕಾಲುಸಂಕ (ಸಣ್ಣ ಸೇತುವೆ) ಏಕಾಏಕಿ ಮುರಿದು ಬಿದ್ದ ಪರಿಣಾಮ ಅವಘಡ ಸಂಭವಿಸಿ ಎಂಟು ಮಂದಿ ಗಾಯಗೊಂಡ ಘಟನೆ ನಡೆದಿದೆ.

ದೈವದ ಭಂಡಾರವನ್ನು ತಾಕೋಡೆ ಬರ್ಕೆ ಧರ್ಮನೇಮಕ್ಕೆ ಪಲ್ಲಕ್ಕಿಯಲ್ಲಿ ಹೊತ್ತು ಕೊಂಡೊಯ್ಯುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಕೊಂಬು ಹಾಗೂ ಬ್ಯಾಂಡ್ ವಾದ್ಯಗಳೊಂದಿಗೆ ಮೆರವಣಿಗೆ ಸಾಗುತ್ತಿದ್ದ ಸಂದರ್ಭದಲ್ಲಿ ಕಾಲುಸಂಕ ಕುಸಿದು ಪಲ್ಲಕ್ಕಿ ಉರುಳಿ ಬಿದ್ದಿದೆ.

ಸಂಕ ಮುರಿದ ವೇಳೆ ಬೀಮ್ ಪಲ್ಲಕ್ಕಿ ಹೊತ್ತವರ ಮೇಲೆ ಬಿದ್ದ ಪರಿಣಾಮ ಸುನಿಲ್ ಶೆಟ್ಟಿ ಮುಕಾಲ್ದಿ (ಮಾರೂರು), ಲೋಕೇಶ್ ಭಂಡಾರಿ ಸೇರಿದಂತೆ ಪಲ್ಲಕ್ಕಿ ಹೊತ್ತವರನ್ನೊಳಗೊಂಡು ಒಟ್ಟು ಎಂಟು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವಘಡದಲ್ಲಿ ಪಲ್ಲಕ್ಕಿಯಲ್ಲಿದ್ದ ಮೊಗಮೂರ್ತಿ ಹಾಗೂ ಇತರೆ ಧಾರ್ಮಿಕ ಪರಿಕರಗಳಿಗೂ ಹಾನಿಯಾಗಿದೆ ಎಂದು ತಿಳಿದುಬಂದಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


Spread the love

Exit mobile version