ವಿದ್ಯಾರ್ಥಿನಿಲಯಕ್ಕೆ ಪ್ರವೇಶಿಸಿ ಬಟ್ಟೆ ಕಳವು ಮಾಡುತ್ತಿದ್ದ ಆರೋಪಿ ಬಂಧನ

Spread the love

ವಿದ್ಯಾರ್ಥಿನಿಲಯಕ್ಕೆ ಪ್ರವೇಶಿಸಿ ಬಟ್ಟೆ ಕಳವು ಮಾಡುತ್ತಿದ್ದ ಆರೋಪಿ ಬಂಧನ

ಬೆಳ್ಳಾರೆ: ಸರ್ಕಾರಿ ವಿದ್ಯಾರ್ಥಿನಿಲಯಕ್ಕೆ ಅತಿಕ್ರಮ ಪ್ರವೇಶಿಸಿ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳನ್ನು ಕಳವು ಮಾಡಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.

ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ ಸೆ.2ರಂದು ಬೆಳಿಗ್ಗೆ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳು ಕಾಣೆಯಾಗಿರುವುದನ್ನು ಗಮನಿಸಿದ್ದಾರೆ. ಈ ಕುರಿತು ವಿದ್ಯಾರ್ಥಿನಿಯರು ಮೇಲ್ವಿಚಾರಕಿಗೆ ಮಾಹಿತಿ ನೀಡಿದ್ದರು.

ನಂತರ ವಿದ್ಯಾರ್ಥಿನಿಲಯದಲ್ಲಿದ್ದ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಸೆ.2ರ ಮುಂಜಾನೆ ಅಪರಿಚಿತ ಯುವಕನೋರ್ವ ವಿದ್ಯಾರ್ಥಿನಿಲಯಕ್ಕೆ ಅತಿಕ್ರಮ ಪ್ರವೇಶಿಸಿ, ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳಲ್ಲಿ ಕೆಲವು ಬಟ್ಟೆಗಳನ್ನು ಕಳವು ಮಾಡಿಕೊಂಡು ತೆರಳಿರುವುದು ಕಂಡುಬಂದಿದೆ.

ಈ ಕುರಿತು ಸೆ.5ರಂದು ನೀಡಿದ ದೂರಿನ ಮೇರೆಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 54/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 331(4), 305ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು ಪುತ್ತೂರು ಕೊಳ್ತಿಗೆ ನಿವಾಸಿ ಕೆ. ರಾಮಚಂದ್ರ (35) ಎಂಬಾತನನ್ನು ಸೆ.7ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ಸೆ.15ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.


Spread the love
Subscribe
Notify of

0 Comments