ಮಹಿಳೆಯನ್ನು ಹಿಂಬಾಲಿಸಿ ಅನುಚಿತ ವರ್ತನೆ: ಆರೋಪಿ ಬಂಧನ
ಪುತ್ತೂರು: ಮಹಿಳೆಯೊಬ್ಬರನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿಕೊಂಡು ಬಂದು ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೂಕ್ತ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.
ನವೆಂಬರ್ 6, 2026ರಂದು ಮಧ್ಯಾಹ್ನ ಪುತ್ತೂರಿನ ಕುರಿಯ ಎಂಬಲ್ಲಿ ಸಂತ್ರಸ್ತ ಮಹಿಳೆಯೊಬ್ಬರು ನಡೆದುಕೊಂಡು ಹೋಗುತ್ತಿದ್ದಾಗ, ಸ್ಕೂಟರ್‌ನಲ್ಲಿ ಬಂದ ಯುವಕನೊಬ್ಬ ಅವರನ್ನು ಹಿಂಬಾಲಿಸಿಕೊಂಡು ಬಂದು ಸಮೀಪದಲ್ಲಿ ಸ್ಕೂಟರ್ ನಿಲ್ಲಿಸಿ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಇದರಿಂದ ಭಯಗೊಂಡ ಮಹಿಳೆ ಬೊಬ್ಬೆ ಹೊಡೆದಿದ್ದು, ಅವರ ಕೂಗಾಟ ಕೇಳಿ ಸ್ಥಳೀಯರು ಧಾವಿಸಿ ಯುವಕನನ್ನು ಹಿಡಿದು ವಿಚಾರಿಸಿದ್ದಾರೆ. ಈ ವೇಳೆ ಆತ ಇಯಾಸ್ ಪುರುಷರಕಟ್ಟೆ ಎಂದು ತನ್ನ ಹೆಸರನ್ನು ತಿಳಿಸಿದ್ದಾನೆ.
ಅಲ್ಲದೆ, ಇದೇ ಯುವಕ ಅಕ್ಟೋಬರ್ 30ರಂದು ಕೂಡ ಮಹಿಳೆಯನ್ನು ಹಿಂಬಾಲಿಸಿಕೊಂಡು ಬಂದಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 139/2026ರಂತೆ ಬಿಎನ್‌ಎಸ್‌ಎಸ್ 2023ರ ಕಲಂ 75(2), 78(1), 79ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೂಕ್ತ ಜಾಮೀನು ಷರತ್ತುಗಳ ಮೇಲೆ ಬಿಡುಗಡೆ ಮಾಡಿದೆ.













