Home Mangalorean News Kannada News ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಪ್ರಚೋದನೆ: ಆರೋಪಿಯ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಪ್ರಚೋದನೆ: ಆರೋಪಿಯ ಬಂಧನ

Spread the love

ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಪ್ರಚೋದನೆ: ಆರೋಪಿಯ ಬಂಧನ

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಪ್ರಚೋದಿಸುವ ವಿಡಿಯೋ ಹಂಚಿದ ಆರೋಪದಲ್ಲಿ ಒಬ್ಬರನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.

2025ರ ಅಕ್ಟೋಬರ್ ತಿಂಗಳಲ್ಲಿ ಫೇಸ್‌ಬುಕ್‌ನಲ್ಲಿ “ನಝೀರ ಮಂಗಳೂರು” ಎಂಬ ಖಾತೆಯಿಂದ AI ತಂತ್ರಜ್ಞಾನದ ಮೂಲಕ ತಿರುಚಿದ ವಿಡಿಯೋವನ್ನು ಹಂಚಿ ಸಮಾಜದಲ್ಲಿ ಕೋಮು ದ್ವೇಷ ಹುಟ್ಟುಹಾಕಲು ಪ್ರಚೋದನೆ ನೀಡಲಾಗಿದೆ ಎಂಬ ದೂರಿನ ಮೇರೆಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಕಲಂ 196, 353(1), 351(2) ಬಿಎನ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆಯ ವೇಳೆ “ನಝೀರ ಮಂಗಳೂರು” ಖಾತೆಯ ಮಾಹಿತಿ ಪಡೆದು ಪರಿಶೀಲಿಸಿದಾಗ, ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಕುಡೆಲ್ ಹೌಸ್ ನಿವಾಸಿ ಮಹಮ್ಮದ್ ರಫೀಕ್ (38) ಎಂಬಾತನೇ ಆ ಖಾತೆಯಿಂದ ವಿಡಿಯೋ ಹಂಚಿರುವುದು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಮಾರ್ಚ್ 22, 2026ರಂದು ಬೆಂಗಳೂರಿನಲ್ಲಿ ಬಂಧಿಸಿ, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

Exit mobile version