Home Mangalorean News Kannada News 03 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ

03 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ

Spread the love

03 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ

ವಿಟ್ಲ: ಕಳ್ಳತನ ಪ್ರಕರಣವೊಂದರಲ್ಲಿ ಕಳೆದ ಮೂರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೆಳ್ತಂಗಡಿ ನಿವಾಸಿ ರಾಜೇಶ್ (41) ಎಂದು ಗುರುತಿಸಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ವಿಟ್ಲ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 204/2018ರ ಐಪಿಸಿ ಕಲಂ 379ರಡಿ ದಾಖಲಾಗಿದ್ದ ಕಳ್ಳತನ ಪ್ರಕರಣದಲ್ಲಿ ರಾಜೇಶ್ ಆರೋಪಿ ಆಗಿದ್ದನು. ಆದರೆ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದನು.

ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ ವಿಟ್ಲ ಪೊಲೀಸ್ ಠಾಣೆಯ ಎಎಸ್‌ಐ ಜಯರಾಮ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಸಿಪಿಸಿ ವೆಂಕಪ್ಪ (2355) ಹಾಗೂ ಸಿಪಿಸಿ ಶಿವಾನಂದ (2462) ಅವರು ಜುಲೈ 6ರಂದು ಮಂಗಳೂರಿನಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


Spread the love

Exit mobile version