ಆಸಿಡ್ ದಾಳಿ ಪ್ರಕರಣ: ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ

Spread the love

ಆಸಿಡ್ ದಾಳಿ ಪ್ರಕರಣ: ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಪುತ್ತೂರು: ಆಸಿಡ್ ದಾಳಿ ಪ್ರಕರಣದಲ್ಲಿ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹3 ಲಕ್ಷ ದಂಡ ವಿಧಿಸಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಕಡಬ ಪೊಲೀಸ್ ಠಾಣೆಯಲ್ಲಿ 2020ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಕಡಬ ಕೊಡಿಂಬಳ ನಿವಾಸಿ ಜಯಾನಂದ ಕೆ. (60) ಶಿಕ್ಷೆಗೆ ಗುರಿಯಾದ ಆರೋಪಿ.

ಪ್ರಕರಣದ ತನಿಖೆ ನಡೆಸಿದ್ದ ಆಗಿನ ತನಿಖಾಧಿಕಾರಿ ಹಾಗೂ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾಗಿದ್ದ ಕುಸುಮಧರ ಅವರು ಆರೋಪಿಯ ವಿರುದ್ಧ ಸೂಕ್ತ ಸಾಕ್ಷ್ಯಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದಿದ್ದು, ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ್ ಅವರು ಆರೋಪಿಗೆ ವಿವಿಧ ಕಲಂಗಳಡಿ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.

ಶಿಕ್ಷೆಯ ವಿವರ:

ಐಪಿಸಿ ಕಲಂ 326A ಅಡಿಯಲ್ಲಿ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹3,00,000 ದಂಡ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿ 2 ವರ್ಷಗಳ ಸರಳ ಕಾರಾಗೃಹ ಶಿಕ್ಷೆ.
ಐಪಿಸಿ ಕಲಂ 504 ಅಡಿಯಲ್ಲಿ 1 ವರ್ಷ ಕಾರಾಗೃಹ ಶಿಕ್ಷೆ ಹಾಗೂ ₹5,000 ದಂಡ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿ 3 ತಿಂಗಳ ಸರಳ ಕಾರಾಗೃಹ ಶಿಕ್ಷೆ.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಕೃಷ್ಣವೇಣಿ, ಹರಿಶ್ಚಂದ್ರ ಉದ್ಯಾವರ್, ಪ್ರಕಾಶ್ ಚಂದ್ರ ಶೆಟ್ಟಿ ಹಾಗೂ ಜಯಂತಿ ಕೆ. ಅವರು ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿದ್ದರು.


Spread the love
Subscribe
Notify of

0 Comments